Saturday, April 19, 2025
Google search engine

Homeರಾಜ್ಯಸುದ್ದಿಜಾಲಸರ್ಕಾರಿ ಯೋಜನೆಗಳ ಮಾಹಿತಿ ಜನಸಾಮಾನ್ಯರಿಗೆ ನೀಡಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ - ತಾ.ಪಂ. ಆಡಳಿತಾಧಿಕಾರಿ...

ಸರ್ಕಾರಿ ಯೋಜನೆಗಳ ಮಾಹಿತಿ ಜನಸಾಮಾನ್ಯರಿಗೆ ನೀಡಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ – ತಾ.ಪಂ. ಆಡಳಿತಾಧಿಕಾರಿ ಪ್ರಭುಸ್ವಾಮಿ

ವರದಿ: ವಿನಯ್ ದೊಡ್ಡಕೊಪ್ಪಲು

ಕೆ.ಆರ್.ನಗರ: ರಾಜ್ಯ ಸರ್ಕಾರ ಜನ ಸಾಮಾನ್ಯರಿಗೆ ಅನುಕೂಲವಾಗುವಂತಹ ನೂರಾರು ಕಾರ್ಯಕ್ರಮ ಮತ್ತು ಯೋಜನೆಗಳನ್ನು ಜಾರಿಗೆ ತಂದಿದ್ದು ಅಧಿಕಾರಿಗಳು ಅವುಗಳ ಬಗ್ಗೆ ನಿಖರ ಮಾಹಿತಿ ನೀಡಿ ಅರ್ಹರಿಗೆ ಪ್ರಯೋಜನಾಗುವಂತೆ ಕೆಲಸ ಮಾಡಬೇಕು ಎಂದು ತಾ.ಪಂ. ಆಡಳಿತಾಧಿಕಾರಿ ಪ್ರಭುಸ್ವಾಮಿ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಇದರ ಜತೆಗೆ ಇಲಾಖಾವಾರು ಕಾರ್ಯಕ್ರಮಗಳ ಪಟ್ಟಿಯನ್ನು ಕಛೇರಿಯಲ್ಲಿ ಪ್ರದರ್ಶಿಸಿ ಮಾಧ್ಯಮಗಳ ಮೂಲಕ ಜನ ಸಾಮಾನ್ಯರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಬಡ ಜನತೆಯ ತೆರಿಗೆ ಹಣವನ್ನು ಸದುಪಯೋಗ ಪಡಿಸುವತ್ತ ಗಮನಹರಿಸ ಬೇಕು ಎಂದರು.

ಈ ನಿಟ್ಟಿನಲ್ಲಿ ಪ್ರಮುಖವಾಗಿ ಆರೋಗ್ಯ, ಕಂದಾಯ, ಕೃಷಿ ಇಲಾಖೆಯ ಅಧಿಕಾರಿ ವರ್ಗದವರು ಇಲಾಖೆಯ ಸಿಬ್ಬಂದಿಗಳಿಗೆ ಮೊದಲು ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಆ ಮೂಲಕ ಕಛೇರಿಗೆ ಬರುವ ಸಾಮಾನ್ಯ ಜನತೆಗೆ ಮನವರಿಕೆ ಮಾಡಿಕೊಡಲು ಪ್ರಮಾಣೀಕ ಪ್ರಯತ್ನ ಮಾಡುವಂತೆ ಹೇಳಿದ ಅವರು ಈ ಬಗ್ಗೆ ಯಾವುದೇ ದೂರುಗಳು ಬಾರದ ರೀತಿಯಲ್ಲಿ ಕೆಲಸ ನಿರ್ವಹಿಸಿ ವರದಿ ನೀಡುವಂತೆ ತಿಳಿಸಿದರು.

ಸಮಾಜ ಕಲ್ಯಾಣ ಮತ್ತು ಬಿಸಿಎಂ ಇಲಾಖೆಯ ವತಿಯಿಂದ ವಸತಿ ಶಾಲೆಗಳ ಜತೆಗೆ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳಿಗೆ ಹೈಟೆಕ್ ಗ್ರಂಥಾಲಯ ಆರಂಭಿಸಿ ಅನುಕೂಲ ಕಲ್ಪಿಸುವುದರ ಜತೆಗೆ ನಿಲಯದಲ್ಲಿರುವ ಪ್ರತಿ ವಿದ್ಯಾರ್ಥಿಯೂ ಕಡ್ಡಾಯವಾಗಿ ಉತ್ತೀರ್ಣವಾಗುವಂತೆ ನೋಡಿಕೊಳ್ಳುವಂತೆ ಕರ್ತವ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು.

ಮುಂಗಾರು ಮಳೆ ಸಮರ್ಪಕವಾಗಿ ಆಗುತ್ತಿರುವ ಹಿನ್ನಲೆಯಲ್ಲಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದು ಅವರಿಗೆ ಕೃಷಿ ಇಲಾಖೆ ವತಿಯಿಂದ ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ ಸೇರಿದಂತೆ ಕೃಷಿ ಯಂತ್ರೋಪಕರಣನ್ನು ಸಕಾಲದಲ್ಲಿ ವಿತರಿಸುವಂತೆ ತಾಕೀತು ಮಾಡಿದ ಆಡಳಿತಾಧಿಕಾರಿಗಳು ರಾಜ್ಯಾದ್ಯಂತ ಡೆಂಗ್ಯೂ ಹರಡುತ್ತಿದ್ದು ಈ ವಿಚಾರದಲ್ಲಿ ಆರೋಗ್ಯಾಧಿಕಾರಿಗಳು ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡು ಸಾರ್ವಜನಿಕರಲ್ಲಿ ಮನವರಿಕೆ ಮಾಡಿಕೊಡಬೇಕು ಎಂದು ಕಿವಿ ಮಾತು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜನಾಂಗ ಮತ್ತು ಪಂಗಡದವರು ವಾಸಿಸುವ ಪ್ರದೇಶಗಳಿಗೆ ರಸ್ತೆ ಮತ್ತು ಚರಂಡಿ ನಿರ್ಮಾಣ ಮಾಡಲು ೩ ಕೋಟಿ ರೂ ಮಂಜೂರಾಗಿದ್ದು ಅದನ್ನು ಆದ್ಯತೆ ಮೇರೆಗೆ ಖರ್ಚು ಮಾಡಲು ಗಮನ ಹರಿಸುವಂತೆ ಸಮಾಜ ಕಲ್ಯಾಣಾಧಿಕಾರಿ ಅಶೋಕ್ ಅವರಿಗೆ ನಿರ್ದೇಶನ ನೀಡಿದರಲ್ಲದೆ ಯಾವುದೇ ಇಲಾಖೆಗಳಲ್ಲಿ ಸಮಸ್ಯೆಗಳು ಬಂದಲ್ಲಿ ಚರ್ಚಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ತಾ.ಪಂ. ಇಒ ಜಿ.ಕೆ.ಹರೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಕೃಷಿ ಇಲಾಖೆಯ ಕೆ.ಜೆ.ಮಲ್ಲಿಕಾರ್ಜುನ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವಿನುತ್, ರಾಜಾರಂವೈಲಾಯ, ಸಿಡಿಪಿಒ ಸಿ.ಎಂ.ಅಣ್ಣಯ್ಯ ಸೇರಿದಂತೆ ಇತರ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

RELATED ARTICLES
- Advertisment -
Google search engine

Most Popular