Friday, April 18, 2025
Google search engine

Homeಅಪರಾಧನಾಡಪ್ರಭು ಕೆಂಪೇಗೌಡರ ವಿರುದ್ಧ ಅವಮಾನಕರ ಪೋಸ್ಟ್: ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು

ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಮಾನಕರ ಪೋಸ್ಟ್: ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು

ಬೆಂಗಳೂರು: ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗುವ ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲಾಗಿದೆ. 

ನಟ ಚೇತನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಕೆಂಪೇಗೌಡರ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ವಕೀಲ ಆರ್ ಎಲ್ ಎನ್ ಮೂರ್ತಿ ಎಂಬುವರು ದೂರು ನೀಡಿದ್ದು, ‘ನಟ ಎಂದು ಹೇಳಿಕೊಳ್ಳುವ ವಿದೇಶಿ ಪ್ರಜೆಯಾದ ಚೇತನ್ ಅವರಿಂದ ನಾಡಪ್ರಭು ಕೆಂಪೇಗೌಡರಿಗೆ ಅವಹೇಳನವಾಗಿದೆ ಎಂದು ಆರೋಪ ಮಾಡಿದ್ದಾರೆ.

ಚೇತನ್ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲೇನಿದೆ?
ಇಬ್ಬರು ಯೋಧರ ಕಥೆಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ

ಟಿಪ್ಪು ಸುಲ್ತಾನ್ – ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ

ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ

ಈ ರೀತಿ ನಟ ಚೇತನ್ ಅಹಿಂಸಾ ಅವರು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದು, ಇದರಿಂದ ನಾಡಪ್ರಭು ಕೆಂಪೇಗೌಡರಿಗೆ ಅಗೌರವ ಉಂಟಾಗಿದೆ ಎಂದು ಆರೋಪಿಸಿ ವಕೀಲ ಆರ್ ಎಲ್ ಎನ್ ಮೂರ್ತಿ ಅವರು ನೀಡಿರುವ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular