ಚಿತ್ರದುರ್ಗ: ನಗರದ ಸರ್ಕಾರಿ ಕಲಾ ಕಾಲೇಜಿನ ಕ್ರೀಡಾಂಗಣದಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ 2023-24ನೇ ಸಾಲಿನ ಅಂತರ ಕಾಲೇಜು ಕಬಡ್ಡಿ ಕ್ರೀಡಾ ಕೂಟ ಹಾಗೂ ಆಯ್ಕೆ ಪ್ರಕ್ರಿಯೆ ಜರುಗಿತು.
ದಾವಣಗೆರೆಯ ದೇವರಾಜು ಅರಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನ, ಎ,ಆರ್,ಎಮ್ ಕಾಲೇಜು ದ್ವಿತೀಯ ಸ್ಥಾನ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತಿಯ ಸ್ಥಾನ ಹಾಗೂ ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು ನಾಲ್ಕನೇ ಸ್ಥಾನ ಪಡೆಯಿತು.
ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನ ಪ್ರಾಚಾರ್ಯ ಬಿ.ಟಿ.ತಿಪ್ಪೇರುದ್ರಸ್ವಾಮಿ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಕ್ರೀಡಾ ಅಧಿಕಾರಿ ವೀರಪ್ಪ ಬಹುಮಾನ ವಿತರಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಎಲ್. ನಾಗರಾಜಪ್ಪ, ಡಾ.ಎಸ್. ಆರ್. ಲೇಪಾಕ್ಷ, ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಮಂಜುನಾಥ ಇದ್ದರು.