ಬೆಂಗಳೂರು: ವಾಸ್ತವ ಹಾಗೂ ವಿಕಸಿತ ಭಾರತಕ್ಕೆ ಪೂರಕ ಬಜೆಟ್. ಜನಪ್ರಿಯ ಘೋಷಣೆಗಳಿಂದ ದೇಶದ ಆರ್ಥಿಕತೆ ಹಾಳಾಗುತ್ತದೆ ಎಂಬು ದನ್ನು ಮನಗಂಡು ದೇಶದ ಭವಿಷ್ಯಕ್ಕೆ ಪೂರಕವಾದ ಬಜೆಟ್‌ಗೆ ಒತ್ತು. ಆರು ದಶಕಗಳಿಗೂ ಹೆಚ್ಚು ಕಾಲದಿಂದ ಬಗೆಹರಿಯದ ತೆರಿಗೆ ಸಂಬಂಧಿತ ವ್ಯಾಜ್ಯಗಳನ್ನು ಪರಿಹರಿಸಲು ಕ್ರಮದ ಘೋಷಣೆ.
೪೧,೦೦೦ ರೈಲುಗಳ ಬೋಗಿಗಳನ್ನು ವಂದೇ ಭಾರತ್ ರೈಲಿನ ಬೋಗಿಯ ಗುಣಮಟ್ಟಕ್ಕೆ ವಿಸ್ತರಿಸಲು ಚಿಂತನೆ ನಡೆಸಿರುವುದು ಖುಷಿ ವಿಚಾರ. ಬಂದರುಗಳ ಅಭಿವೃದ್ಧಿ, ಲಕ್ಷದ್ವೀಪ ಪ್ರವಾಸಿ ತಾಣದ ಅಭಿವೃದ್ಧಿ, ಗೂಡ್ಸ್ ರೈಲುಗಳಿಗೆ ಪ್ರತ್ಯೇಕ ಕಾರಿಡಾರ್, ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ವಿಮಾನ ಯಾನ ಸೌಕರ್ಯ, ೫೦೦ಕ್ಕೂ ಹೆಚ್ಚು ಉಡಾನ್ ಮಾರ್ಗಗಳನ್ನು ಗುರುತಿಸಿ ರುವುದು ಮೂಲ ಸೌಕರ್ಯದ ವಿಸ್ತರಣೆಯಲ್ಲಿ ಮಹತ್ವದ ಪಾತ್ರ ವಹಿಸಲಿವೆ. ಧಾರ್ಮಿಕ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಿರುವುದು ವಿಶೇಷ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.