ವರದಿ ಎಡತೊರೆ ಮಹೇಶ್
ಹೆಚ್ ಡಿ ಕೋಟೆ: ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ರವರ ಏಳು ಜನರ ಸಮಿತಿಯ ಆದೇಶದ ಮೇರೆಗೆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು ಎಂದು ಮಾತಂಗ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ರವೀಶ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ತಾಲೂಕು ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಮಾತಂಗ ಜನ ಜಾಗೃತಿ ವೇದಿಕೆಯ ಅಧ್ಯಕ್ಷ ರವೀಶ್ ಜನಸಂಖ್ಯೆಗೆ ಅನುಗುಣವಾಗಿ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಮಾಡಬೇಕು, ಬ್ಯಾಕ್ ಲಾಗ್ ಹುದ್ದೆಗಳನ್ನು ತಡೆಯಿಡಿಯಬೇಕು ಇಲ್ಲವಾದರೆ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ ಒಳ ಮೀಸಲಾತಿ ಜಾರಿ ಮಾಡಿ ನಂತರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಸಮುದಾಯ ಮುಖಂಡ ಶಿವಯ್ಯ ಮಾತನಾಡಿ ರಾಜ್ಯದಲ್ಲಿ ಬಹುಸಂಖ್ಯಾತ ಜನ ಮಾದಿಗ ಸಮುದಾಯ. ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಜಾರಿ ಮಾಡಿ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ ರಾಜ್ಯ ಸರ್ಕಾರ ಯಥಾವತ್ತಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ತಿಳಿಸಿದರು.
ಬೂದನೂರು ವೆಂಕಟೇಶ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ಸ್ ಸರ್ಕಾರ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಜಾರಿಗೆ ಬದ್ದ ಎಂದು ಹೇಳಿ ಇವತ್ತಿಗೂ ಅದರ ಬಗ್ಗೆ ಧ್ವನಿ ಎತ್ತುವ ಕೆಲಸ ಮಾಡಿಲ್ಲ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಜಾರಿ ಮಾಡಬೇಕು ಜಾರಿ ಮಾಡುವ ತನಕ ಬ್ಯಾಕ್ ಲಾಗ್ ಹುದ್ದೆಗಳನ್ನು ತಡೆ ಹಿಡಿಯಬೇಕು. ಒಂದು ವೇಳೆ ಸರ್ಕಾರ ಒಳ ಮೀಸಲಾತಿಯನ್ನು ಜಾರಿ ಮಾಡದೆ ಇದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದರು.
ಜೊತೆಗೆ ಒಳ ಮೀಸಲಾತಿ ಜಾರಿ ಕುರಿತು ಮೈಸೂರಿನಲ್ಲಿ ೧೬-೧೦-೨೦೨೪ ಬುಧವಾರ ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆಯನ್ನು ಮಾಡುವ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಮಾತಂಗ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಗಿರಿ ಪ್ರಸಾದ್, ಎಡತೊರೆ ಡಿ.ನಾಗರಾಜು, ಸರಗೂರು ಶ್ರೀನಿವಾಸ್, ಖಜಾಂಚಿ ಶಿವಾಜಿ, ಸಂಚಾಲಕ ಶಿವರಾಜಯ್ಯ, ಸಂಘಟನಾ ಕಾರ್ಯದರ್ಶಿ ಕೃಷ್ಣಾಪುರ ಮಹೇಂದ್ರ, ಚೇತನ್, ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.