ಬೆಂಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯದ 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಡೆಯುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸೌಧದ ಮುಂಭಾಗದಲ್ಲಿರುವ ಭವ್ಯ ಮೆಟ್ಟಿಲುಗಳ ಬಳಿ ನಗಾರಿ ಭಾರಿಸುವ ಮೂಲಕ ಚಾಲನೆ ನೀಡಿದರು.
ಈ ವಿಶ್ವ ದಾಖಲೆಯ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರುಗಳಾದ ಡಾ. ಹೆಚ್.ಸಿ. ಮಹಾದೇವಪ್ಪ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನ ಸಭಾ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಯು.ಬಿ.ವೆಂಕಟೇಶ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕಾರ್ಯಕ್ರಮದ ರಾಯಭಾರಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಸೇರಿದಂತೆ ಹಲವರು ಉಪಸ್ಥಿತರಿದ್ದರು.