Saturday, April 19, 2025
Google search engine

Homeರಾಜ್ಯಸುದ್ದಿಜಾಲಸೆ.15 ರಂದು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಸೆ.15 ರಂದು ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಪ್ರತಿಯೊಬ್ಬರೂ ಕೈಜೋಡಿಸಿ ಯಶಸ್ಸುಗೊಳಿಸಲು ಎಡಿಸಿ ಆರ್.ಐಶ್ವರ್ಯ ಮನವಿ

ಮಡಿಕೇರಿ: ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಇದೇ ಸೆಪ್ಟೆಂಬರ್, 15 ರಂದು ಹಮ್ಮಿಕೊಳ್ಳಲಾಗಿದ್ದು, ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಸೇರಿದಂತೆ ಎಲ್ಲರೂ ಕೈಜೋಡಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಕೋರಿದ್ದಾರೆ.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಬೀದರ್‍ನಿಂದ ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದ್ದು, ಆ ನಿಟ್ಟಿನಲ್ಲಿ ಸ್ಥಳೀಯ ಹಂತದಲ್ಲಿ ಅಗತ್ಯ ಸಹಕಾರಕ್ಕೆ ಕೋರಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಸಂಪಾಜೆಯಿಂದ ಶಿರಂಗಾಲದ ಕಡುವಿನ ಹೊಸಹಳ್ಳಿ ಗಡಿಭಾಗದವರೆಗೆ ಮಾನವ ಸರಪಳಿ ನಡೆಸಲು ಉದ್ದೇಶಿಸಲಾಗಿದ್ದು, ಕೊಡಗು ಜಿಲ್ಲೆ ಅರಣ್ಯ ಪ್ರದೇಶ ಹೊಂದಿರುವುದರಿಂದ ಕೆಲವು ವಿನಾಯಿತಿಯನ್ನು ನೀಡಲಾಗಿದೆ ಎಂದು ತಿಳಿಸಿದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ರಾಷ್ಟ್ರೀಯ ಹಬ್ಬ ಮಾದರಿಯಲ್ಲಿ ಯಶಸ್ಸುಗೊಳಿಸಬೇಕಿದೆ. ಸದ್ಯ ಆಯಾಯ ಗ್ರಾಮ/ ಗ್ರಾಮ ಪಂಚಾಯತಿಗಳಲ್ಲಿ ಸ್ಥಳೀಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮಾನವ ಸರಪಳಿ ಅಥವಾ ರಿಲೇ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ಸಿಗೆ ಮನವಿ ಮಾಡಿದರು.

ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಪರಿಣಾಮಕಾರಿಯಾಗಿ ಯಶಸ್ಸುಗೊಳಿಸಲು ಎಲ್ಲರ ಸಹಕಾರ ಅತ್ಯಗತ್ಯವಾಗಿದೆ. ವಿದ್ಯಾರ್ಥಿಗಳು, ಎನ್‍ಸಿಸಿ, ಎನ್‍ಎಸ್‍ಎಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಎಲ್ಲರೂ ಕೈಜೋಡಿಸುವಂತೆ ಆರ್.ಐಶ್ವರ್ಯ ಅವರು ಕೋರಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂಪಾಜೆಯಿಂದ ಶಿರಂಗಾಲ ಬಳಿಯ ಕಡುವಿನ ಹೊಸಳ್ಳಿವರೆಗೆ ಸುಮಾರು 72 ಕಿ.ಮೀ.ವರೆಗೆ ಮಾನವ ಸರಪಳಿ/ ರಿಲೇ ಮೂಲಕ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದೆ ಎಂದರು.

ಸದ್ಯ ಕೊಡಗು ಜಿಲ್ಲೆಯಲ್ಲಿ ಮಳೆ ಇರುವುದರಿಂದ ಪರಿಸ್ಥಿತಿಯನ್ನು ನೋಡಿಕೊಂಡು ಸ್ಥಳೀಯ ಮಟ್ಟದಲ್ಲಿ ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ ಎಂದರು.

ರಾಷ್ಟ್ರದ ಪ್ರಜಾಪ್ರಭುತ್ವ ಮಹತ್ವವನ್ನು ಪ್ರತಿಯೊಬ್ಬರಿಗೂ ತಿಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದ್ದರಿಂದ ಕುಟುಂಬ ಸಮೇತ ಸ್ಥಳೀಯ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಹಕರಿಸುವಂತೆ ಶೇಖರ್ ಅವರು ಕೋರಿದರು.

ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲೆಯಲ್ಲಿ 10 ಲಕ್ಷ ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಇದೇ ಸಂದರ್ಭದಲ್ಲಿ ತಿಳಿಸಿದರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸುವಂತಾಗಬೇಕು. ಜಿಲ್ಲೆಯ ಸಂಜೀವಿನಿ ಒಕ್ಕೂಟದವರು ಹೀಗೆ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತಾಗಬೇಕು. ಗ್ರಾ.ಪಂ., ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿದಂತೆ ಎಲ್ಲರೂ ಕೈಜೋಡಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರಾದ ಕೆ.ಟಿ.ಬೇಬಿಮ್ಯಾಥ್ಯೂ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳು ಸೇರಿದಂತೆ ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರತಿನಿಧಿಗಳು ಸ್ಥಳೀಯ ಮಟ್ಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular