Saturday, April 19, 2025
Google search engine

Homeಸ್ಥಳೀಯಹೋಲಿ ಕ್ರೆಸೆಂಟ್ ಶಿಕ್ಷಣ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ

ಹೋಲಿ ಕ್ರೆಸೆಂಟ್ ಶಿಕ್ಷಣ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಣೆ

ಮೈಸೂರು: ನಗರದ ಪ್ರತಿಷ್ಠಿತ ಹೋಲಿ ಕ್ರೆಸೆಂಟ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಂದು ಶುಕ್ರವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಶಾಲೆಯ ಕಾರ್ಯದರ್ಶಿಗಳಾದ ಅಲ್ತಾಫ್‌ಅಹಮದ್ ಅವರು ಮಾತನಾಡಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಮಾಡುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು. ಮತ್ತು ಶಾಲೆಯ ಅಧ್ಯಕ್ಷ ಡಾ. ಶಾಜಿಯಾ ಅವರು ಮಾತನಾಡಿ ಇಂದಿನ ಕಲುಷಿತ ವಾತಾವರಣ, ಆಹಾರ ಪದ್ಧತಿಗಳ ಹೊರತಾಗಿಯೂ ನಮ್ಮ ಆರೋಗ್ಯವನ್ನು ಬಲವರ್ಧನೆಗೊಳಿಸಲು ಯೋಗ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ ಮಕ್ಕಳು ಸೂರ್ಯ ನಮಸ್ಕಾರ, ವೃಕ್ಷಾಸನ, ಪರ್ವಕೋತ್ಥಾಸನ ಮುಂತಾದ ಆಸನಗಳನ್ನು ಅಭ್ಯಾಸ ಮಾಡಿ ಅವುಗಳಿಂದಾಗುವ ಪ್ರಯೋಜನಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶಿವಮೂರ್ತಿ ಎಸ್, ಲತಾಆನಂದ್, ಹೋಲಿ ಕ್ರೆಸೆಂಟ್ ಪಿ.ಯುಕಾಲೇಜಿನ ಪ್ರಾಂಶುಪಾಲರಾದ ಸ್ಟ್ಯಾನ್ಲಿ ಪಾಲ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular