ಪಿರಿಯಾಪಟ್ಟಣ: ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸ ಮಾಡಿಕೊಡದೆ ಕಚೇರಿಗೆ ಅಲೆದಾಡಿಸಿದರು ಸಹ ಸಾರ್ವಜನಿಕರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಬಹುದೆಂದು ಲೋಕಾಯುಕ್ತ ಡಿವೈಎಸ್‌ಪಿ ಮಾಲ್ತೇಶ್ ತಿಳಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಿ ಮಾತನಾಡಿದ ಅವರು ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಹಾಗೂ ಯಾರಿಗೂ ಎದರುವುದಿಲ್ಲ ಎಂಬಾ ದೂರು ಕೇಳಿಬರುತ್ತಿದೆ. ತಮ್ಮ ಇಲಾಖೆಗಳಲ್ಲಿ ಕ್ಯಾಶ್ ಡಿಕ್ಲರೇಷನ್ ಪುಸ್ತಕಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ತಾಲೂಕಿನಲ್ಲಿರುವ ಕೆರೆಗಳನ್ನ ರಕ್ಷಿಸುವುದು ಆಯಾಯ ಸಂಬಂಧಪಟ್ಟ ಅಧಿಕಾರಿಗಳ ಕರ್ತವ್ಯವಾಗಿದೆ ಆದರೆ ಅಧಿಕಾರಿಗಳು ನಿರ್ಲಕ್ಷದಿಂದ ಕೆರೆಗಳ ಕ್ಷಣಿಸುತಿವೆ. ಮುಂದಿನ ಪೀಳಿಗೆಯ ಏಳಿಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೆರೆಗಳ ರಕ್ಷಣೆಗೆ ಮುಂದಾಗಬೇಕು ಹಾಗೂ ತಾಲೂಕಿನಲ್ಲಿರುವ ಕೆರೆಗಳ ಸಂಖ್ಯೆಯ ಮಾಹಿತಿಯನ್ನು ಶೀಘ್ರವೇ ನೀಡಬೇಕೆಂದು ಸಾರ್ವಜನಿಕರು ಸರ್ಕಾರಿ ಅಧಿಕಾರಿಗಳಿಗೆ ಕರೆ ಮಾಡಿದಾಗ ದೂರವಾಣಿಗಳನ್ನು ಸ್ವೀಕರಿಸುತ್ತಿಲ್ಲ ಎಂಬ ದೂರು ಹೆಚ್ಚಾಗಿ ಕೇಳಿ ಬರುತ್ತಿದ್ದು ಇಂತಹ ವರ್ತನೆಗಳನ್ನು ಸರಿಪಡಿಸಿಕೊಳ್ಳಬೇಕು ಇಲ್ಲದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕುಡಿಯುವ ನೀರಿನ ಟ್ಯಾಂಕ್ಗಳನ್ನು ಶುಚ್ಚಿಗೊಳಿಸದೆ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿಗಳು ನಕ್ಕಲಿ ಬಿಲ್ಲುಗಳನ್ನು ಮಾಡುತ್ತಿದ್ದಾರೆ ಈ ಬಗ್ಗೆ ಹೆಚ್ಚು ನಿಗ ವಹಿಸಬೇಕೆಂದು ತಾಲೂಕು ಕಾರ್ಯ ನಿರ್ವಹಕಾಧಿಕಾರಿಗಳಿಗೆ ಸೂಚನೆ ನೀಡಿದರು ಅಂಗನವಾಡಿ ಕೇಂದ್ರಗಳಲ್ಲಿ ನೌಕರರು ರೋಟೇಶನ್ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದು ಶುಚಿತ್ವಕ್ಕೆ ಮಹತ್ವ ನೀಡುತ್ತಿಲ್ಲ ಇದನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿಬೇಕು ಹೀಗೆ ತಾಲೂಕಿನ ವಿವಿಧ ಇಲಾಖೆಗಳ ಮೇಲೆ ದೂರುಗಳು ಕೇಳಿ ಬರುತ್ತಿದ್ದು ಅಧಿಕಾರಿಗಳು ಎಚ್ಚರ ವಹಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು.
ಪಟ್ಟಣದ ಪುರಸಭೆ, ವಿದ್ಯುತ್ ಇಲಾಖೆ, ಶಿಕ್ಷಣ ಇಲಾಖೆ,ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿ ಗಳಿಗೆ ಸಂಬಂಧಪಟ್ಟಂತೆ ಹೆಚ್ಚು ದೂರುಗಳು ಕೇಳಿ ಬರುತ್ತಿವೆ ಇಂತಹ ದೂರುಗಳ ಬಗ್ಗೆ ಹೆಚ್ಚು ನಿಗವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುಮಾರು ೩೦ ದೂರಗಳನ್ನು ಸ್ವೀಕರಿಸಿ ಇವುಗಳ ಪೈಕಿ ಕೆಲವು ದೂರುಗಳಿಗೆ ಸ್ಥಳದಲ್ಲೇ ಪರಿಹಾರ ನೀಡಿ ಮತ್ತೆ ಕೆಲವು ದೂರುಗಳಿಗೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರ ಮುಖಾಂತರ ಸೂಕ್ತ ಕ್ರಮವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್, ರೂಪಶ್ರೀ, ರವಿಕುಮಾರ, ಉಮೇಶ್, ತಹಸೀಲ್ದಾರ್ ಕುಂಜಿ ಅಹಮದ್ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್ ಲೋಕಾಯುಕ್ತ ಕಚೇರಿಯ ಸಿಬ್ಬಂದಿಗಳಾದ ತ್ರಿವೇಣಿ, ಪ್ರದೀಪ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಪಿಡಿಓಗಳು ಹಾಜರಿದ್ದರು.