ರಾಮನಗರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.