Friday, April 11, 2025
Google search engine

Homeರಾಜಕೀಯ‘ಶಕ್ತಿ’ ಯೋಜನೆ ಉದ್ಘಾಟನೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಗೆ ಆಹ್ವಾನ

‘ಶಕ್ತಿ’ ಯೋಜನೆ ಉದ್ಘಾಟನೆಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಗೆ ಆಹ್ವಾನ

ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ  ಚಾಲನೆಗೆ ಕ್ಷಣಗಣನೆ ಶುರುವಾಗಿದ್ದು, ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ಅವರಿಗೆ ಆಹ್ವಾನಿಸಲಾಗಿದೆ.

ಕಾಂಗ್ರೆಸ್’​ನ ಐದು ಗ್ಯಾರೆಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾನುವಾರ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಚಾಲನೆ ನೀಡಲಿದ್ದಾರೆ. ಈ ಯೋಜನೆ ಸರ್ಕಾರಿ ಬಸ್’​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡುತ್ತದೆ.

ಭಾನುವಾರದ ಸರ್ಕಾರಿ ಕಾರ್ಯಕ್ರಮದ ವಿವರ:

11 ಗಂಟೆಗೆ ಶಕ್ತಿ ಯೋಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತೆ. ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ವಾಗತಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯನವರು “ಶಕ್ತಿ” ಯೋಜನೆ ಲೋಗೋ ಅನಾವರಣಗೊಳಿಸುತ್ತಾರೆ. ಬಳಿಕ ಸ್ಮಾರ್ಟ್ ಕಾರ್ಡ್ ಮಾಡೆಲ್ ಅನಾವರಣಗೊಳಿಸಲಾಗುತ್ತೆ. ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಶಕ್ತಿ ಯೋಜನೆ ಕುರಿತು ಭಾಷಣ ಮಾಡುತ್ತಾರೆ.

ಬಿಎಂಟಿಸಿ ಬಸ್ ​ನಲ್ಲಿ ಸಿಎಂ ಪ್ರಯಾಣ

ವಿಧಾನ ಸೌಧದ ಮುಂಭಾಗ 4 ನಿಗಮದ ಸಾಮಾನ್ಯ ಬಸ್ ನಿಲ್ಲಿಸಲು ಫ್ಲಾನ್ ಮಾಡಲಾಗಿದೆ. ಎಲ್ಲ ಬಸ್ ಗಳಲ್ಲೂ ‘0’ ಚಾರ್ಜ್ ಟಿಕೆಟ್ ನೀಡಲು ತಯಾರಿ ನಡೆದಿದೆ. ಕಾರ್ಯಕ್ರಮದ ಭಾಗವಾಗಿ BS- 6 ಬಿಎಂಟಿಸಿ ಬಸ್ ​ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ಹಾಗೂ ಕಂಡಕ್ಟರ್ ರಿಂದ 0 ಚಾರ್ಜ್ ಟಿಕೆಟ್ ಪಡೆದು ಬಸ್ ​ನಲ್ಲಿರುವ ಮಹಿಳೆಯರಿಗೆ ನೀಡಲಿದ್ದಾರೆ. ಬಿಎಂಟಿಸಿಯ BS- 6 ಬಸ್ ನಲ್ಲಿ ಸಿಎಂ ಸಿಟಿ ರೌಂಡ್ಸ್ ಹೋಗಲಿದ್ದಾರೆ. ವಿಧಾನ ಸೌಧ ಒಂದು ರೌಂಡ್, ಮೆಜೆಸ್ಟಿಕ್ ಅಥವಾ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬಿಎಂಟಿಸಿಯಲ್ಲಿ ಒಂದು ರೌಂಡ್ ಹೋಗಲಿದ್ದಾರೆ. ಬಸ್​ ನಲ್ಲಿರುವ ಅಧಿಕಾರಿಗಳು ಸೇರಿದಂತೆ ಎಲ್ಲ ಮಹಿಳೆಯರಿಗೆ 0 ಚಾರ್ಜ್ ಟಿಕೆಟ್ ನೀಡಲು ವ್ಯವಸ್ಥೆ ಮಾಡಲಾಗಿದೆ.

ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಚಾಲನೆ ದೊರೆಯುತ್ತಿದ್ದಂತೆ ಎಲ್ಲ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಕ್ತಿ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತೆ. ಅಲ್ಲಿನ ಸ್ಥಳೀಯ ಶಾಸಕರು ಅಥವಾ ಜನಪ್ರತಿನಿಧಿಗಳಿಂದ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುತ್ತೆ. ಮಧ್ಯಾಹ್ನ 1 ಗಂಟೆಯ ನಂತ್ರ ಬಿಎಂಟಿಸಿ, ಕೆಎಸ್ ಆರ್ ಟಿಸಿ, ಎನ್ ಡಬ್ಲ್ಯೂಆರ್ ಟಿಸಿ, ಕೆಕೆಆರ್ ಟಿಸಿ ಬಸ್ ​ಗಳಲ್ಲಿ‌ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತೆ. ಅಡ್ರೆಸ್ ಪ್ರೂಫ್ (ಆಧಾರ್ ಕಾರ್ಡ್ ,ವೋಟರ್ ಐಡಿ, ರೇಷನ್ ಕಾರ್ಡ್) ತೋರಿಸಿ ಮಹಿಳೆಯರು ಪ್ರಯಾಣಿಸಬಹುದು. 0 ಟಿಕೆಟ್ ಪಡೆದು ನಾಲ್ಕು ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

RELATED ARTICLES
- Advertisment -
Google search engine

Most Popular