Friday, April 11, 2025
Google search engine

Homeರಾಜಕೀಯಬಿಜೆಪಿ ಸೇರಲು ವರಿಷ್ಟರಿಂದ ಆಹ್ವಾನ ಬಂದಿದೆ: ಕೆ.ಎಸ್.ಈಶ್ವರಪ್ಪ

ಬಿಜೆಪಿ ಸೇರಲು ವರಿಷ್ಟರಿಂದ ಆಹ್ವಾನ ಬಂದಿದೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ:  ಬಿಜೆಪಿ ಸೇರಲು ತಮಗೆ ಪಕ್ಷದ ವರಿಷ್ಟರಿಂದ ಆಹ್ವಾನ ಬಂದಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಈ ವಿಷಯ ತಿಳಿಸಿದರು. ಬಿಜೆಪಿ ಸೇರಲು ನನಗೆ ಪಕ್ಷದ ವರಿಷ್ಟರಿಂದ ಆಹ್ವಾನ ಬಂದಿದೆ. ಆದರೆ, ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಬಗ್ಗೆ ಇನ್ನಷ್ಟೇ ಮಾತುಕತೆ ನಡೆಯ ಬೇಕಿದೆ. ಆದರೆ, ಬಿಜೆಪಿ ಸೇರುವುದಂತೂ ಖಚಿತ. ಆದರೆ, ಯಾವಾಗ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ ಎಂದು ಹೇಳಿದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಿಂದ ತಮ್ಮ ಪುತ್ರನಿಗೆ ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶಗೊಂಡು ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿತ್ತು. ಬಳಿಕ, ಚುನಾವಣೆಯಲ್ಲಿ ಅವರು ಬಿಜೆಪಿಯ ಬಿ. ವೈ.ರಾಘವೇಂದ್ರ ವಿರುದ್ಧ ಸೋಲು ಅನುಭವಿಸಿದ್ದರು.

RELATED ARTICLES
- Advertisment -
Google search engine

Most Popular