Tuesday, April 8, 2025
Google search engine

Homeರಾಜ್ಯಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಸಿಎಂ ಆದೇಶ

ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಸಿಎಂ ಆದೇಶ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.

ಕಳೆದ ವರ್ಷ ಜು.23 ಮತ್ತು 24ರಂದು ನಡೆದ ಸಹಾಯಕ ಸರಕಾರಿ ಅಭಿಯೋಜಕರು, ಸಹಾಯಕ ಸರಕಾರಿ ವಕೀಲರ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರ ಅಕ್ರಮ ನಡೆದಿರುವ ಕುರಿತು ವ್ಯಾಪಕ ದೂರುಗಳು ಕೇಳಿಬಂದಿದ್ದವು.

ಈ ಸಂಬಂಧ ಸಲ್ಲಿಸಿದ್ದ ದೂರುಗಳನ್ನು ಆಧಾರಿಸಿ ಕೂಡಲೇ ನಿರ್ದಾಕ್ಷಿಣ್ಯವಾದ ಇಲಾಖಾ ತನಿಖೆ ನಡೆಸಿ ತಪ್ಪಿತಸ್ಥರ ವಿವರಗಳೊಂದಿಗೆ 10 ದಿನದೊಳಗೆ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ.

RELATED ARTICLES
- Advertisment -
Google search engine

Most Popular