Monday, April 21, 2025
Google search engine

Homeರಾಜಕೀಯನನ್ನ ಮೌನವೂ ವೀಕ್ನೆಸ್ ಅಲ್ಲಾ? ಸತೀಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ನನ್ನ ಮೌನವೂ ವೀಕ್ನೆಸ್ ಅಲ್ಲಾ? ಸತೀಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ: ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ಮಾಡಿದ್ದರು. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ನನ್ನ ಮೌನವೂ ವೀಕ್ನೆಸ್ ಅಲ್ಲಾ? ಎಂದು ಹೇಳುವ ಮೂಲಕ ಪರೋಕ್ಷವಾಗಿ ಸತೀಶ್ ಜಾರಕಿಹೊಳಿಗೆ ಸ್ಪಷ್ಟನೆ ನೀಡಿದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ನನ್ನ ಮತ್ತು ಸತೀಶ್ ಅಣ್ಣವರ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅಣ್ಣವರು ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೊಗಲಿಲ್ಲ ಎಂದು ತಮ್ಮ ಮತ್ತು ಸತೀಶ್ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟವಿದೆ ಎಂಬ ವಂದತಿಗೆ ಸ್ಪಷ್ಟನೆ ನೀಡಿದರು.

ಹೈಕಮಾಂಡ್ ಯಾಕೆ ತಡೆಯಿತು ಅನ್ನೋದನ್ನ ಸತೀಶ್ ಜಾರಕಿಹೊಳಿ ಅವರಿಗೆ ಕೇಳಿ. ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಳಗಾವಿ ಭೇಟಿಗೆ ಶಾಸಕರು, ಜಿಲ್ಲಾಧ್ಯಕ್ಷರು ಬಾರದಿರುವ ವಿಚಾರವಾಗಿ ಮಾತನಾಡಿದ ಅವರು ಅಧ್ಯಕ್ಷರ ಪ್ರವಾಸದಲ್ಲಿ ಮೊದಲು ಗೊಂದಲವಿತ್ತು. ಯಾರಾದರೂ ಬಂದು ಸ್ವಾಗತ ಮಾಡಬೇಕಿತ್ತು ಎಂದು ಹೇಳಿದರು.

ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂದು ನಾವು ಹೇಳುತ್ತೇವೆ. ಜೆಡಿಎಸ್‌ನಲ್ಲಿ ಎರಡು ಗುಂಪಿದೆ, ಎಲ್ಲವೂ ಸರಿ ಇಲ್ಲ ಎಂದು ನಾವೂ ಹೇಳುತ್ತೇವೆ. ಕುಮಾರಸ್ವಾಮಿ ಅವರದು, ಸಿಎಂ ಇಬ್ರಾಹಿಂ ಅವರದ್ದು ಒಂದು ಗುಂಪಿದೆ. ಅವರನ್ನ ಅವರು ಹೊರ ಹಾಕಿದ್ದರೆ, ಇವರನ್ನ ಅವರು ಹೊರ ಹಾಕಿದ್ದಾರೆ. ಬಿಜೆಪಿಯಲ್ಲಿ ಮೂರು ಗುಂಪಿದೆ ಇಲ್ಲಾ ಅಂತೇನಿಲ್ಲ. ನಮ್ಮಲ್ಲಿ ಸ್ವಾಭಾವಿಕವಾಗಿ ಗುಂಪಿದೆ ಇಲ್ಲಾ ಅಂತೇನಿಲ್ಲ. ಪಕ್ಷ ಬಂದಾಗ ನಾವೆಲ್ಲಾ ಒಂದಾಗುತ್ತೇವೆ. ಜಿಲ್ಲೆಯಲ್ಲಿ ಬೇರೆ ಬೇರೆ ಇದ್ದರೂ ಚುನಾವಣೆ ಬಂದಾಗ ಒಂದಾಗುತ್ತೇವೆ ಎಂದು ಹೇಳುವ ಮೂಲಕ ಬೆಳಗಾವಿ ರಾಜಕಾರಣದಲ್ಲಿ ಎರಡು ಗುಂಪು ಇದೆ ಎಂದು ಪರೋಕ್ಷವಾಗಿ ಒಪ್ಪಿಕೊಂಡರು.

RELATED ARTICLES
- Advertisment -
Google search engine

Most Popular