ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆಯ ಛಾಯೆ ಕಂಡುಬಂದಿದ್ದು, ಇಸ್ರೇಲ್ ನಡೆಸಿದ ತೀವ್ರ ವೈಮಾನಿಕ ದಾಳಿಯಿಂದ ಇರಾನ್ ಕಂಗೆಟ್ಟಂತಾಗಿದೆ. ಇಸ್ರೇಲ್ ಹಮ್ಮಿಕೊಂಡ ಹಠಾತ್ ದಾಳಿಯಲ್ಲಿ ಇರಾನ್‌ನ ವಿವಿಧ ಭಾಗಗಳಲ್ಲಿ ಕನಿಷ್ಠ 78 ಮಂದಿ ಮೃತಪಟ್ಟಿದ್ದು, 320ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂಬ ವರದಿಗಳು ಲಭ್ಯವಾಗಿವೆ. ಈ ದಾಳಿಯು ಇಂದು ಮುಂಜಾನೆ ಬೆಳಿಗ್ಗೆ ಇರಾನ್‌ನ ರಾಜಧಾನಿ ಟೆಹರಾನ್ ಸೇರಿದಂತೆ ಹಲವಾರು ಪ್ರಮುಖ ಮಿಲಿಟರಿ ಹಾಗೂ ಪರಮಾಣು ಸ್ಥಳಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ.
ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ, ಇರಾನ್ ಇಸ್ರೇಲ್‌ನ ಕೆಲ ಪ್ರದೇಶಗಳನ್ನು ಗುರಿಯಾಗಿಸಿ ಡ್ರೋನ್ ಮತ್ತು ಕ್ಷಿಪಣಿ ಮೂಲಕ ದಾಳಿ ನಡೆಸಿದೆ. ಘಟನೆಯಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇರಾನ್‌ನ ರಾಜಧಾನಿ ಟೆಹರಾನ್‌ನ ಮೆಹ್ರಾಬಾದ್ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ ಬೆಂಕಿ ಮತ್ತು ಭಾರೀ ಹೊಗೆ ಕಾಣಿಸಿಕೊಂಡಿದೆ ಎಂದು ಪತ್ರಕರ್ತರೋರ್ವರು ತಿಳಿಸಿದ್ದಾರೆ. ಸ್ಥಳೀಯ ಮಾಧ್ಯಮಗಳು ಆ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿ ಮಾಡಿದೆ.