ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಬಳ್ಳಾರಿ ನಗರದಲ್ಲಿ ಈ ಹಿಂದಿನ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಗಳಲ್ಲಿ ಮತದಾನದ ಮಹತ್ವ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಏ.07 ರಂದು ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೈಕಲ್‍ನೊಂದಿಗೆ ಹಾಜರಾಗಬೇಕು. ಜಿಲ್ಲಾ ಪಂಚಾಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಕಡ್ಡಾಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದ್ದಾರೆ.