Friday, April 4, 2025
Google search engine

Homeರಾಜಕೀಯಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ ‘ಬಾಂಬ್ ಬೆಂಗಳೂರು’ ಎಂಬ ಕಳಂಕ ತರಬೇಡಿ-ಆರ್​. ಅಶೋಕ ವಾಗ್ದಾಳಿ

ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ ‘ಬಾಂಬ್ ಬೆಂಗಳೂರು’ ಎಂಬ ಕಳಂಕ ತರಬೇಡಿ-ಆರ್​. ಅಶೋಕ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ ‘ಬಾಂಬ್ ಬೆಂಗಳೂರು’ ಎಂಬ ಕಳಂಕ ತರಬೇಡಿ ಎಂದು ವಿರೋಧ ಪಕ್ಷದ ನಾಯಕ ಆರ್​. ಅಶೋಕ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ರಾಜ್ಯದಲ್ಲಿ ಸಮಾಜಘಾತುಕ ಶಕ್ತಿಗಳಿಗೆ ರೆಕ್ಕೆಪುಕ್ಕ ಬಂದಿದೆ. ಶರ್ಟ್ ಗುಂಡಿ ಬಿಚ್ಚಿಕೊಂಡು ಎದೆ ಉಬ್ಬಿಸಿಕೊಂಡು ಓಡಾಡುತ್ತಿದ್ದಾರೆ. ದೇಶದ ಕಾನೂನು ಇವರಿಗೆ ಅನ್ವಯವಾಗಲ್ಲವೆಂಬಂತೆ ವರ್ತಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ಗಲಾಟೆ ಆದಾಗಲೂ ಯಾವುದೇ ಕ್ರಮಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಸರಣಿ ಕೊಲೆಗಳಾದಾಗಲೂ ಸರ್ಕಾರ ಕ್ರಮಕೈಗೊಳ್ಳಲಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದರು. ಆದರೆ ಆಡಳಿತಾರೂಢ ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಕುಕ್ಕರ್ ಸ್ಫೋಟ ಆರೋಪಿಯನ್ನು ಬ್ರದರ್ ಎಂದು ಡಿಕೆ ಶಿವಕುಮಾರ್​ ಹೇಳಿದ್ದರು. ರಾಮೇಶ್ವರಂ ಕೆಫೆ ಆರೋಪಿಯನ್ನು ಅಂಕಲ್ ಎಂದು ಹೇಳುತ್ತಾರೇನೋ? ಇವರನ್ನು ಅಂಕಲ್ ಅಂದರೆ ನಾವೆಲ್ಲರೂ ಏನಾಗಬೇಕು ಎಂದು ಕಿಡಿಕಾರಿದ್ದಾರೆ.

RELATED ARTICLES
- Advertisment -
Google search engine

Most Popular