ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ವೃತ್ತಿ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆಯಿಲ್ಲದಂತೆ ಕಾರ್ಯ ನಿರ್ವಹಿಸುವುದು ಮುಖ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಹೇಳಿದರು.
ಸಾಲಿಗ್ರಾಮ ತಾಲೂಕಿನ ತಂದ್ರೆಕೊಪ್ಪಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾದ ಮುಖ್ಯಶಿಕ್ಷಕ ಎಸ್.ಆರ್.ವೆಂಕಟೇಶ್ ಅವರಿಗೆ ಮಂಗಳವಾರ ಏರ್ಪಡಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಿವೃತ್ತರಾದ ವೆಂಕಟೇಶ್ ಅವರು ಕಾರ್ಯನಿರ್ವಹಿಸಿದ ಎಲ್ಲೆಡೆ ಗಮನ ಸೆಳೆಯುವ ಉತ್ತಮ ಕೆಲಸ ಮಾಡಿದ್ದಾರೆ. ತಂದ್ರೆಕೊಪ್ಪಲು ಶಾಲೆಗೆ ತಮ್ಮ ಸ್ವಂತ ಹಣದಿಂದ ಮೂಲಸೌಕರ್ಯ ಕಲ್ಪಿಸಿದ್ದಾರೆ ಎಂದು ಶ್ಲಾಘಿಸಿದರು.
ಈ ವೇಳೆ ವೆಂಕಟೇಶ್ ಅವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು.ಇಸಿಒಗಳಾದ ಜನಾರ್ಧನ್, ದಾಸಪ್ಪ, ಸಿಆರ್ ಪಿಗಳಾದ ಸಾಲೇಕೊಪ್ಪಲು ಪ್ರಸಾದ್, ಮಹೇಶ್, ಶಿಕ್ಷಕರಾದ ಕುಚೇಲ್, ವಿಜಯ್, ಮಿರ್ಲೆ ಸತೀಶ್ ಇದ್ದರು.