Tuesday, April 22, 2025
Google search engine

Homeರಾಜ್ಯರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ: ಸಚಿವ ಝಮೀರ್ ಆಕ್ರೋಶ

ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ: ಸಚಿವ ಝಮೀರ್ ಆಕ್ರೋಶ

ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಝಮೀರ್ ಅಹಮದ್ ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಪ್ರತಿ ಲೀಟರ್ ಗೆ ೩೨.೯೮ ರು., ಡೀಸೆಲ್ ಪ್ರತಿ ಲೀಟರ್‌ಗೆ ೩೧.೮೩ ರು. ಅಬಕಾರಿ ಸುಂಕ ಸಂಗ್ರಹ ಮಾಡುತ್ತಿದೆ. ಇದರ ಬಗ್ಗೆ ಬಿಜೆಪಿ ನಾಯಕರು ಯಾಕೆ ಧ್ವನಿ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರದಲ್ಲಿ ಪೆಟ್ರೋಲ್ ಬೆಲೆ ೧೦೦ ರು. ದಾಟಿದಾಗ ಇವರ ಧ್ವನಿ ಎಲ್ಲಿ ಅಡಗಿತ್ತು. ಅನಿಲ ಬೆಲೆ ೪೧೯ ಇದ್ದದ್ದು ಸಾವಿರ ರು. ಗಡಿ ದಾಟಿಸಿ ಈಗ ೮೦೫ ಮಾಡಿರುವುದು ಬಿಜೆಪಿ ಸರ್ಕಾರ. ಇದರ ಬಗ್ಗೆ ಬಿಜೆಪಿ ನಾಯಕರು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದ್ದಾರೆ.

RELATED ARTICLES
- Advertisment -
Google search engine

Most Popular