Saturday, April 19, 2025
Google search engine

Homeರಾಜ್ಯಸುದ್ದಿಜಾಲಸಮಾನತೆಯ ಕನಸು ಕಂಡಿದ್ದವರು ಬ್ರಹ್ಮಶ್ರೀ ನಾರಾಯಣ ಗುರು: ಶ್ರೀ ವಿಖ್ಯಾತಾನಂದ ಸ್ವಾಮೀಜಿ

ಸಮಾನತೆಯ ಕನಸು ಕಂಡಿದ್ದವರು ಬ್ರಹ್ಮಶ್ರೀ ನಾರಾಯಣ ಗುರು: ಶ್ರೀ ವಿಖ್ಯಾತಾನಂದ ಸ್ವಾಮೀಜಿ

ರಾಮನಗರ: ಸಾಮಾಜಿಕ ಪಿಡುಗಾದ ಜಾತಿ ಪದ್ದತಿ ಮತ್ತು ಮೂಢನಂಬಿಕೆಗಳ ವಿರುದ್ಧ ಹೋರಾಡಿ ಸಮಾಜದಲ್ಲಿ ಸಮಾನತೆಯನ್ನು ನಿರ್ಮಿಸುವಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸೊಲೂರು ಮಠದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿಗಳು ತಿಳಿಸಿದರು.

ಅವರು ಆ. ೨೦ರ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕಂದಾಯ ಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ಉದ್ಫಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಕೇರಳದಲ್ಲಿ ದಲಿತರು ಮತ್ತು ಮಹಿಳೆಯರ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ವಿರೋಧಿಸಿ ಸಮಾನತೆಯ ಚಳುವಳಿ ರೂಪಿಸಿದರು. ಶಿಕ್ಷಣದಿಂದ ಮಾತ್ರದಿಂದಲೇ ದಲಿತರು ಮತ್ತು ಹಿಂದುಳಿದ ವರ್ಗದವರು ಅಭಿವೃದ್ದಿ ಸಾಧ್ಯ ಎಂಬುವುದನ್ನು ಅರಿತು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿದ ಬ್ರಹ್ಮಶ್ರೀ ನಾರಾಯಣ ಗುರು ಅವರು ಈ ಯುಗದ ಧಾರ್ಮಿಕ ಸಂತರೆನಿಸಿದ್ದಾರೆ ಎಂದರು.

ಕೇರಳಾದಾದ್ಯಂತ ಕರಕುಶಲ ಕೇಂದ್ರಗಳನ್ನು ತೆರೆದು ದಲಿತರಿಗೆ ತರಬೇತಿಯನ್ನು ನೀಡುವ ಮುಖಾಂತರ ಸ್ವಾಭಿಮಾನದಿಂದ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದ್ದರು. ಶಿಕ್ಷಣವನ್ನು ಪಡೆಯುವ ಮುಖಾಂತರ ನಾವೆಲ್ಲಾರೂ ಅಸಮಾನತೆಯ ವಿರುದ್ದ ಹೋರಾಡೊಣ ಎಂದು ನಾಡಿನಾದ್ಯಂತ ಸಂಚರಿಸಿ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದರು ಎಂದು ತಿಳಿಸಿದರು.

ವಿಶೇಷ ಉಪನ್ಯಾಸ ನೀಡಿದ ಬಾಬು ಅವರು ಬ್ರಹ್ಮಶ್ರೀ ನಾರಾಯಣ ಗುರು ಅವರು ಬಸವಣ್ಣನ ನಂತರದ ಸಾಮಾಜಿಕ ಸುಧಾರಣೆಯನ್ನು ತುಂಬಾ ವ್ಯಾಪಕವಾಗಿ ಮಾಡಿದವರಲ್ಲಿ ಮೊದಲಿಗರು, ಅವರ ಆದರ್ಶ ಗುಣಗಳನ್ನು ಇಂದಿನ ತಲೆಮಾರಿನ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಎಸ್. ಸತೀಶ್ ಸದ್ಭಾವನಾ ಪ್ರತಿಜ್ಞೆ ಬೋಧಿಸಿದರು.

ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ೧೭ ವಿದ್ಯಾರ್ಥಿಗಳಿಗೆ ತಲಾ ೫ ಸಾವಿರ ರೂ.ಗಳ ಪ್ರೋತ್ಸಾಹ ಧನವನ್ನು ಜಿಲ್ಲಾ ಈಡಿಗ ಸಮುದಾಯದ ವತಿಯಿಂದ ನೀಡಲಾಯಿತು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಚಂದ್ರಯ್ಯ ಅವರು ಬ್ರಹ್ಮ ಶ್ರೀ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಮಂಜುನಾಥ್, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್, ಜಿಲ್ಲಾ ಗ್ರಂಥಪಾಲಕ ಅಧಿಕಾರಿ ಚನ್ನಕೇಶವ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ರಮೇಶ್ ಬಾಬು, ಸಮುದಾಯದ ಮುಖಂಡರುಗಳಾದ ಸುಧೀರ್, ಲಕ್ಷಿ?ಮಪತಿ, ರವಿಕುಮಾರ್, ಸೂರ್ಯ ನಾರಾಯಣ, ನಾಗೇಶ್, ನಾಗರಾಜು, ಚಂದ್ರಶೇಖರ್, ಲಿಂಗರಾಜು, ಆರ್ ರಮೇಶ್, ಗೋಪಾಲಸ್ವಾಮಿ, ಎಮ್. ಜಿ ಗೋಪಾಲ್, ಜಗನ್ನಾಥ್, ರಾಮರಾಜು, ಇನ್ನೂ ಮುಂತಾದ ಸಮುದಾಯದ ಮುಖಂಡರುಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular