ಬೆಳಗಾವಿ : ಬೆಳಗಾವಿಯಲ್ಲಿ ಸುವರ್ಣಸೌಧ ಮುತ್ತಿಗೆ ಹಾಕುವ ಪ್ರಯತ್ನ ಮಾಡಿದ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಪೊಲೀಸರು ತಡೆದು ಲಾಠಿಚಾರ್ಜ್ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸುವರ್ಣಸೌಧ ಮುತ್ತಿಗೆ ಹಾಕುವುದನ್ನು ತಡೆಯಬೇಕಾಗಿತ್ತು. ಹಾಗಾಗಿ ಅನಿವಾರ್ಯವಾಗಿ ಲಾಠಿಚಾರ್ಜ್ ಮಾಡಬೇಕಾಯಿತು ಎಂದು ಪೊಲೀಸರು ನಡೆದುಕೊಂಡ ರೀತಿಯನ್ನು ಸಮರ್ಥಿಸಿಕೊಂಡಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮಹದೇವಪ್ಪ, ವೆಂಕಟೇಶ್, ಸುಧಾಕರ್ ಅವರನ್ನ ಮೂರು ಜನ ಸಚಿವರುಗಳನ್ನು ಕಳುಹಿಸಿಕೊಟ್ಟಿದ್ದಾರೆ. ಅದರಲ್ಲಿ ಸ್ಥಳೀಯ ಸಚಿವರಾಗಿರುವಂತಹ ಲಕ್ಷ್ಮಿ ಹೆಬ್ಬಾಳಕರ್ ಕೂಡ ಇದ್ದರು ಅವರು ಕೂಡ ಮುಖ್ಯಮಂತ್ರಿಗಳು ಈ ರೀತಿ ಹೇಳಿದ್ದಾರೆ. ಎಲ್ಲರು ಕುಳಿತುಕೊಂಡು ಚರ್ಚೆ ಮಾಡೋಣ ಬನ್ನಿ ಅಂತ ಹೇಳಿದ ಕಳಿಸಿದ್ದಾರೆ ಎಂದರು.
ಆಗಲು ಕೂಡ ಇಲ್ಲ ನಾವು ಬರೋದಿಲ್ಲ ಮುಖ್ಯಮಂತ್ರಿಗಳೇ ಇಲ್ಲಿಗೆ ಬರಲಿ ಅಂತ ಹೇಳಿದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬರೋದಿಕ್ಕೆ ಸಾಧ್ಯವಿಲ್ಲ ಎಂದಾಗ ಇದಕ್ಕಿದಂತೆ ಸ್ವಾಮೀಜಿಯವರು ವಿಧಾನಸೌಧಕ್ಕೆ ಹೋಗೋಣ ಬನ್ನಿ ಎಂದು ಕರೆದುಕೊಂಡು ಹೋಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ರಸ್ತೆಗೆ ಬರೋದಕ್ಕೆ ಶುರು ಮಾಡಿದ್ದಾರೆ ಬ್ಯಾರಿಕೆಡ್ ತಳ್ಳಿ ಮುಖ್ಯರಸ್ತೆಗೆ ಬರೋದಕ್ಕೆ ಪ್ರಯತ್ನ ಮಾಡಿದಾಗ ಅಲ್ಲಿ ಪೊಲೀಸರು ಅವರನ್ನು ತಡೆದಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ನಮ್ಮ ಬಳಿಯೂ ವಿಡಿಯೋ ಮತ್ತು ಫೋಟೋಗಳಿವೆ. ಪಂಚಮಸಾಲಿ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡಿದ್ದರು. ಸ್ವತಹ ಸಿಎಂ ಹೋರಾಟ ಸ್ಥಳಕ್ಕೆ ಬರಬೇಕು ಎಂದು ಪಟ್ಟು ಹಿಡಿದಿದ್ದರು.ನಾವು ಸಚಿವರನ್ನು ಪ್ರತಿಭಟನೆ ಸ್ಥಳಕ್ಕೆ ಕಳಿಸಿದಾಗಲೂ ಕೂಡ ಅವರು ಒಪ್ಪಲಿಲ್ಲ ಪಂಚಮಸಾಲಿ ಹೋರಾಟಗಾರರು ಮೊದಲು ಚಪ್ಪಲಿ, ಕಲ್ಲು ಎಸೆದರು. ಜಯ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಹಲವರು ಕಾನೂನು ಕೈಗೆತ್ತಿಕೊಂಡರು.
ಮುತ್ತಿಗೆ ಹಾಕುತ್ತೇವೆ ಎಂದಾಗ ತಡೆಯುವುದು ಅನಿವಾರ್ಯ ಆಗಿತ್ತು. ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಹೀಗೆ ಅವಕಾಶ ನೀಡಿದರೆ ನಾಳೆ ಎಲ್ಲರೂ ಮುತ್ತಿಗೆ ಹಾಕಲು ಬರುತ್ತಾರೆ. ಕೋರ್ಟ್ ತಡೆಯಾಜ್ಞೆ ಇದ್ದಾಗಲೂ ನಿರ್ಬಂಧ ನಿಯಮ ಉಲ್ಲಂಘನೆಯಾಗಿದೆ. ಜಯ ಮೃತ್ಯುಂಜಯ ಸ್ವಾಮೀಜಿ ಎಲ್ಲರೂ ಸೇರಿ ನಿರ್ಬಂಧ ಉಲ್ಲಂಘಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಹಾಗೂ ಫೋಟೋ ದಾಖಲೆಗಳಿವೆ ಎಂದು ಬೆಳಗಾವಿಯಲ್ಲಿ ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.