ಬಳ್ಳಾರಿ : ಕಳೆದ ತಿಂಗಳಲ್ಲಿ ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಬಳ್ಳಾರಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಪರಿಶೀಲನೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಾಣಂತಿಯರ ಸಾವಿಗೆ ಐವಿ ದ್ರಾವಣ ಅಷ್ಟೇ ಅಲ್ಲ ಶಸ್ತ್ರಚಿಕಿತ್ಸೆಯ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಅನುಮಾನ ವ್ಯಕ್ತಪಡಿಸಿದ್ದಾರೆ.
ನಿನ್ನೆ ಜಿಲ್ಲಾಸ್ಪತ್ರೆಗೆ ನಾಗಲಕ್ಷ್ಮಿ ಚೌಧರಿ ಅವರು ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್, ಶಸ್ತ್ರಚಿಕಿತ್ಸಾ ಕೊಠಡಿ, ಆಸ್ಪತ್ರೆಗೆ ಸರಬರಾಜು ಆಗುವ ನೀರಿನ ಟ್ಯಾಂಕ್‌ಗಳನ್ನು ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು ಶಸ್ತ್ರಚಿಕಿತ್ಸೆ ಕೊಠಡಿ ಹಾಗೂ ಲ್ಯಾಬ್ ಗಳನ್ನು ಎಲ್ಲವನ್ನು ಪರಿಶೀಲನೆ ಮಾಡಿದರು. ಬಳಿಕ ಮಾಧ್ಯಮಗಳೊಂದಿಗೆ ಶಸ್ತ್ರಚಿಕಿತ್ಸೆಯಾದ ಬಳಿಕ ನಂಜು ಹಾಗೂ ಬ್ಯಾಕ್ಟೀರಿಯಾ ದಿಂದ ಬಾಣಂತಿಯರಿಗೆ ಇನ್ಫೆಕ್ಷನ್ ಆಗುವ ಸಾಧ್ಯತೆ ಇದೆ. ಶಸ್ತ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ, ಟೇಬಲ್ ಇಡೀ ಹರಿಗೆ ಸ್ವ್ಯಾಬ್ ಸ್ಯಾಂಪಲ್ ವರದಿ ಬೇಕಿದೆ. ಶಸ್ತ್ರಚಿಕಿತ್ಸಾ ಕೊಠಡಿಯಿಂದಲೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ವಚ್ಛತೆ ಇಲ್ಲದಿದ್ದರೆ ಇನ್ಫೆಕ್ಷನ್ ಆಗಿ ಬಾಣಂತಿಯರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅದರ ವರದಿ ಬೇಕು ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.