Tuesday, April 15, 2025
Google search engine

Homeಅಪರಾಧಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ: ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ

ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣ: ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನ

ಮಂಗಳೂರು: ಐವನ್ ಡಿಸೋಜಾ ಮನೆಗೆ ಕಲ್ಲು ತೂರಾಟ ಪ್ರಕರಣದಲ್ಲಿ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರ ಬಂಧನವಾಗಿದೆ.

ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳು. ಬಂಧಿತರಿಬ್ಬರೂ ವಿಹೆಚ್‌ಪಿ, ಬಜರಂಗದಳದ ಕಾರ್ಯಕರ್ತರಾಗಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು ರಾಜ್ಯಪಾಲರ ಕುರಿತು ಎಂಎಲ್‌ಸಿ ಐವನ್ ಡಿಸೋಜಾ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಐವನ್ ಡಿಸೋಜಾ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಆಗಸ್ಟ್ 20 ರ ತಡರಾತ್ರಿ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆದಿತ್ತು. ಬೈಕ್‌ನಲ್ಲಿ ಬಂದ ಇಬ್ಬರು ಐವನ್ ಮನೆ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದರು ಪ್ರಕರಣದ ಕುರಿತು ತನಿಖೆ ನಡೆಸಿ ಇಬ್ಬರನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular