ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ೨೦೨೩-೨೪ನೇ ಸಾಲಿನ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯು ಜನವರಿ ೧ ರಂದು ಬೆಳಿಗ್ಗೆ ೧೧ ಗಂಟೆಗೆ ಕಲಾಮಂದಿರಲ್ಲಿ ನಡೆಯಲಿದೆ.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಶಾಸಕ ಪಿ.ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಶಾಸಕ ಮರಿತಿಬ್ಬೇಗೌಡ, ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ ವಿಧಾನಸಭೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಎ.ಬಿ ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ ಮಂಜುನಾಥ್, ಕೆ.ಎಂ ಉದಯ್ ಹಾಗೂ ಶಿಲ್ಪ ಸಂಸ್ಕೃತಿ ಚಿಂತಕ ವೇದ ಬ್ರಹ್ಮ ತಿಲಕೇಶ್ವರಮೂರ್ತಿ ಅವರು ಮುಖ್ಯಭಾಷಣಕಾರರಾಗಿ ಆಗಮಿಸಲಿದ್ದಾರೆ.