ಯಳಂದೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಪ್ರವಾಸಿತಾಣವಾಗಿರುವ ಬಿಳಿಗಿರಿರಂಗನಬೆಟ್ಟದ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಪಟ್ಟಣ ಪಂಚಾಯಿತಿಯ ಮಾಜಿ ಸದಸ್ಯ ಜೆ. ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.
ಪ್ರಧಾನ ಅರ್ಚಕರೂ ಸೇರಿದಂತೆ ಒಟ್ಟು ೯ ಜನ ಸದಸ್ಯರಿರುವ ಈ ಸಮಿತಿಯಲ್ಲಿ ಜೆ. ಶ್ರೀನಿವಾಸ್‌ರವರೂ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನ ಆಯ್ಕೆಗೆ ಕಾರಣರಾದ ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ನನಗೆ ನೀಡಿರುವ ಜವಾಬ್ದಾರಿಯನ್ನು ನಾನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ಮಾಹಿತಿ ನೀಡಿದರು.