Monday, April 21, 2025
Google search engine

Homeರಾಜ್ಯಜಗದೀಶ್ ಶೆಟ್ಟರ್‌ ಬಿಜೆಪಿಗೆ ವಾಪಸ್ ಆಗೋದು ಸುಳ್ಳು: ಡಿ.ಕೆ.ಶಿವಕುಮಾರ್

ಜಗದೀಶ್ ಶೆಟ್ಟರ್‌ ಬಿಜೆಪಿಗೆ ವಾಪಸ್ ಆಗೋದು ಸುಳ್ಳು: ಡಿ.ಕೆ.ಶಿವಕುಮಾರ್

ಮಂಗಳೂರು(ದಕ್ಷಿಣ ಕನ್ನಡ): ಜಗದೀಶ್ ಶೆಟ್ಟ‌ರ್ ಅವರನ್ನು ಬಿಜೆಪಿಗೆ ಪುನಃ ಕರೆತರಲು ತೆರೆಮರೆಯ ಕಸರತ್ತು ನಡೆಯುತ್ತಿರುವ ವಿಚಾರವನ್ನು ತಳ್ಳಿಹಾಕಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಗದೀಶ್ ಶೆಟ್ಟರ್‌ ಬಿಜೆಪಿಗೆ ವಾಪಸ್ ಆಗೋದು ಸುಳ್ಳು ಎಂದಿದ್ದಾರೆ.

ಮಂಗಳೂರಿನಲ್ಲಿ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅದಕ್ಕಾಗಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಬಿಜೆಪಿಯಲ್ಲೇ ಶೇಕ್ ಆಗಿದೆ. ಅವರಲ್ಲೇ ಆಂತರಿಕ ಸಮಸ್ಯೆಗಳು ಬಹಳಷ್ಟಿವೆ. ಶೆಟ್ಟರ್ ಅವರನ್ನು ಸುಮ್ಮನೆ ಕರೆಯುತ್ತಿದ್ದಾರೆ. ಕೆಲವರು ಹೋಗಿ ಕರೆಯೋದು ಮಾಡುತ್ತಿದ್ದಾರೆ. ಆದರೆ ಜಗದೀಶ್ ಶೆಟ್ಟರ್‌ಏನು ದಡ್ಡರಾ ಎಂದು ಪ್ರಶ್ನಿಸಿದರು.

ಶೆಟ್ಟರ್‌ಅವರಿಗೆ ಆಗಿದ್ದ ಅವಮಾನ, ನೋವು ಎಲ್ಲ ಯೋಚನೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ. ಬಂದು ನಮಗೆ ದೊಡ್ಡ ಸಹಾಯ ಕೂಡ ಮಾಡಿದ್ದಾರೆ. ಚುನಾವಣೆಯಲ್ಲಿ ಶೆಟ್ಟರ್ ಸೋತಿರಬಹುದು, ತಕ್ಷಣ ಕಾಂಗ್ರೆಸ್ ಪಕ್ಷಗುರುತಿಸಿ ವಿಧಾನ ಪರಿಷತ್ ಗೆ ಅವಕಾಶ ಮಾಡಿ ಕೊಟ್ಟಿದೆ ಎಂದರು.

RELATED ARTICLES
- Advertisment -
Google search engine

Most Popular