ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿಯ ಮಿನಿ ಸಭಾಂಗಣದಲ್ಲಿ ನಿರ್ದೇಶಕರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರಾದ ನಾಗೇಂದ್ರ ಪ್ರಸಾದ್ ಅವರು ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಹಂತ 1 ರಿಂದ 4 ಹಂತಗಳ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿದ್ದು, ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಹಾಗೂ ಶೀಘ್ರವಾಗಿ ಹರ್ ಘರ್ ಜಲ್ ಘೋಷಣೆ ಮಾಡಿ ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಬರ ಇದೆ. ಕುಡಿಯುವ ನೀರಿಗೆ ಪ್ರಥಮ ಆಧ್ಯತೆ ನೀಡಬೇಕು. ಮುಂದಿನ 6 ತಿಂಗಳುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸಿ, ಕುಡಿಯುವ ನೀರು ಪೂರೈಸುವ ಕುರಿತು ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಶೌಚಾಲಯ ರಹಿತ ಕುಟುಂಬಳಿಗೆ ಶೌಚಾಲಯ ನಿರ್ಮಸಲು ಅರ್ಜಿ ಸಲ್ಲಿಸುವಂತೆ ಹೆಚ್ಚು ಪ್ರಚಾರ ಕೈಗೊಳ್ಳಲು ಹಾಗೂ ಶೌಚಾಲಯ ಪಾವತಿಯನ್ನು ಮಾಡಲು ಕ್ರಮವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ, ಎಂ.ಆರ್.ಎಫ್, ಗೋಬರ್ಧನ್ ಘಟಕ, ಮಲ ತ್ಯಾಜ್ಯ ಸಂಸ್ಕರಣಾ ಘಟಕ ಹಾಗೂ ಬೂದು ನೀರು ನಿರ್ವಹಣೆಯ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಆರ್ಥಿಕ ಪ್ರಗತಿ ಸಾಧಿಸುವಂತೆ ತಿಳಿಸಿದರು.
ಸಭೆಯಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹ ಅಧಿಕಾರಿಗಳಾದ ಕೆ.ಎಂ ಗಾಯತ್ರಿ, ಕೃಷ್ಣಮೂರ್ತಿ,ಅಧೀಕ್ಷಕ ಇಂಜಿನಿಯರ್, ಡಾ.ಕೃಷ್ಣರಾಜು, ಉಪ ಕಾರ್ಯದರ್ಶಿ (ಅಭಿವೃದ್ಧಿ), ರಂಜಿತ್ ಕುಮಾರ್, ಕಾರ್ಯಪಾಲಕ ಅಭಿಯಂತರರು,RDWSD, ಎಲ್ಲಾ ತಾಲೂಕಿನ ಸಹಾಯಕ ಕಾರ್ಯಪಾಲಕ ಅಭಿಯಂತರರಯ ಹಾಗೂ ಸಮಾಲೋಚಕರುಗಳು ಉಪಸ್ಥಿತರಿದ್ದರು.