Friday, January 16, 2026
Google search engine

Homeರಾಜಕೀಯಜಲ್ನಾ ಪಾಲಿಕೆ ಚುನಾವಣೆ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪಂಗಾರ್ಕರ್ ಗೆಲುವು

ಜಲ್ನಾ ಪಾಲಿಕೆ ಚುನಾವಣೆ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪಂಗಾರ್ಕರ್ ಗೆಲುವು

ಮುಂಬೈ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಫಲಿತಾಂಶ ಘೋಷಣೆಯಾದ ಕೂಡಲೇ ಬೆಂಬಲಿಗರೊಂದಿಗೆ ಸಂಭ್ರಮಾಚರಣೆ ನಡೆಸಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ​ ಹತ್ಯೆ ನಡೆದಿತ್ತು.

ಪಂಗಾರ್ಕರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಯಿತು. ಸೆಪ್ಟೆಂಬರ್ 4, 2024 ರಂದು ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ನೀಡಿತ್ತು. ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 13 ರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಶ್ರೀಕಾಂತ್ ಪಂಗಾರ್ಕರ್ ಅವರು ನೃತ್ಯ ಮಾಡುತ್ತಾ ಮತ್ತು ಡ್ರಮ್ಸ್ ಬಾರಿಸುತ್ತಾ ಹೂವುಗಳನ್ನು ಎಸೆಯುವ ಮೂಲಕ ಸಂಭ್ರಮಿಸಿದ್ದು ಪಿಟಿಐ ಈ ವಿಡಿಯೋ ಹಂಚಿಕೊಂಡಿದೆ. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ವಾರ್ಡ್‌ನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಜನವರಿ 15 ರಂದು ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗಳು ನಡೆದಿದ್ದವು.

RELATED ARTICLES
- Advertisment -
Google search engine

Most Popular