Friday, April 18, 2025
Google search engine

Homeರಾಜ್ಯಜಮೀರ್ ಅಹ್ಮದ್ ರಾಜ್ಯದ ಜನತೆಗೆ ಕ್ಷಮೆ ಯಾಚಿಸಿ, ರಾಜೀನಾಮೆ ನೀಡ್ಬೇಕು: ಜೆಡಿಎಸ್

ಜಮೀರ್ ಅಹ್ಮದ್ ರಾಜ್ಯದ ಜನತೆಗೆ ಕ್ಷಮೆ ಯಾಚಿಸಿ, ರಾಜೀನಾಮೆ ನೀಡ್ಬೇಕು: ಜೆಡಿಎಸ್

ಬೆಂಗಳೂರು: ಜಮೀರ್ ಅಹ್ಮದ್ ರಾಜ್ಯದ ಜನತೆಯಲ್ಲಿ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಬಣ್ಣದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಜಮೀರ್ ಅಹ್ಮದ್ ಅವರೇ, ಹೆಚ್.ಡಿ ಕುಮಾರಸ್ವಾಮಿ ಅವರು ಜಾತಿ, ಪಂಥ ಮತ್ತು ಬಣ್ಣದಿಂದ ಜನನಾಯಕರಾಗಿ ಬೆಳೆದಿಲ್ಲ. ಅವರ ನಾಯಕತ್ವ ಗುಣ, ಸಮಾಜಕ್ಕೆ ಮತ್ತು ಸಮುದಾಯಗಳ ಅಭಿವೃದ್ಧಿಗೆ ಕೊಟ್ಟಿರುವ ಕೊಡುಗೆಗಳು, ಜನಪರ ಯೋಜನೆಗಳು ಮತ್ತು ಉತ್ತಮವಾದ ಆಡಳಿತ ಮತ್ತು ಆರ್ಥಿಕ ಅಭಿವೃದ್ಧಿ ದೃಷ್ಟಿಕೋನದಿಂದಲೇ ಉತ್ತಮ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದೆ.

ಸರ್ವಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ನೀವು ಕ್ಷುಲ್ಲಕ ರಾಜಕೀಯಕ್ಕಾಗಿ ದ್ವೇಷ ಹರಡಲು, ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದೀರಿ. ನೆನಪಿರಲಿ, ಇಲ್ಲಿ ನಿಮ್ಮ ಒಡೆದು ಆಳುವ ನೀತಿಗೆ ಜಾಗವಿಲ್ಲ. ಜನಾಂಗೀಯ ನಿಂದನೆ, ವರ್ಣಭೇದ ಹೇಳಿಕೆಗಳನ್ನು ನೀಡಿ ಅಪಮಾನ ಎಸಗಿರುವ ನೀವು ನಾಡಿನ ಜನರಲ್ಲಿ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಪೋಸ್ಟ್ ಮಾಡಿದೆ.

RELATED ARTICLES
- Advertisment -
Google search engine

Most Popular