Friday, April 18, 2025
Google search engine

HomeUncategorizedರಾಷ್ಟ್ರೀಯಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ: 15 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ: 15 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ನವದೆಹಲಿ: 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಸೆಪ್ಟೆಂಬರ್ 18ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ 15 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಸೋಮವಾರ ಪ್ರಕಟಿಸಿದೆ.

ಇದಕ್ಕೂ ಮೊದಲು ಒಂದು ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಎರಡನೇ ಹಂತದ 10 ಕ್ಷೇತ್ರಗಳಿಗೆ ಹಾಗೂ ಮೂರನೇ ಹಂತದ 19 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಆ ಪಟ್ಟಿಯನ್ನು ಹಿಂಪಡೆಯಲಾಗಿತ್ತು.

ಮೊದಲ ಪಟ್ಟಿಯಲ್ಲಿ ಕಾಶ್ಮೀರದ ಪಾಂಪೋರ್, ಶೋಪಿಯಾನ, ಅನಂತನಾಗ್ ಪಶ್ಚಿಮ ಹಾಗೂ ಅನಂತನಾಗ್ ಸೇರಿದಂತೆ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಾಗಿದೆ. ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಭಾನುವಾರ ಸಂಜೆ ಸಭೆ ನಡೆಸಿತ್ತು.

ಒಟ್ಟು 90 ಕ್ಷೇತ್ರಗಳ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆಯ ಅಧಿಸೂಚನೆಯನ್ನು ಈಚೆಗೆ ಚುನಾವಣಾ ಆಯೋಗವು ಪ್ರಕಟಿಸಿದೆ. ಸೆ. 18ರಂದು 24 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಸೆ. 25ರಂದು 2ನೇ ಹಂತ ಹಾಗೂ ಅ. 1ರಂದು ಮೂರನೇ ಮತ್ತು ಅಂತಿಮ ಹಂತದ ಚುನಾವಣೆ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ‌‌ನಡೆಯಲಿದೆ.

RELATED ARTICLES
- Advertisment -
Google search engine

Most Popular