Saturday, April 19, 2025
Google search engine

HomeUncategorizedರಾಷ್ಟ್ರೀಯಜಮ್ಮು ಮತ್ತು ಕಾಶ್ಮೀರ; ಗುಂಡಿನ ಚಕಮಕಿ, ಮೂವರು ಯೋಧರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರ; ಗುಂಡಿನ ಚಕಮಕಿ, ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಸೇನಾ ಸಿಬ್ಬಂದಿ ಹತರಾಗಿದ್ದಾರೆ ಎಂದು ಅಧಿಕಾರಿಗಳು ಇಂದು ಬೆಳಿಗ್ಗೆ ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದವು. ಇದೇ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು ಎಂದು ಅವರು ಹೇಳಿದರು.

ಗುಂಡಿನ ಚಕಮಕಿಯಲ್ಲಿ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಕುಲ್ಗಾಮ್‌ನ ಹಲಾನ್‌ ಅರಣ್ಯ ಪ್ರದೇಶಗಳಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡು, ನಂತರ ಸಾವನ್ನಪ್ಪಿದರು. ಶೋಧ ಕಾರ್ಯಾಚರಣೆಗಳು ಮುಂದುವರೆದಿದೆ ಎಂದು ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಆಫ್ ಆರ್ಮಿ ಟ್ವೀಟ್​​ನಲ್ಲಿ ತಿಳಿಸಿದೆ.

ಈ ಪ್ರದೇಶಕ್ಕೆ ಹೆಚ್ಚುವರಿ ಪಡೆಗಳು ಧಾವಿಸಿದ್ದು, ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular