ನವದೆಹಲಿ: ಜಮ್ಮು ಮತ್ತು ಕಾಶ್ಮೀ ರದವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಒಂಬತ್ತು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಿತ್ರಪಕ್ಷ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ ) ಜೊತೆ ಸೀಟು ಹಂಚಿಕೆ ಸಂಬಂಧ ಒಪ್ಪಂದದ ಮಾತುಕತೆ ಬಳಿಕ ಪಟ್ಟಿ ಘೋಷಣೆಯಾಗಿದೆ. ಎನ್ ಸಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ನಿವಾಸದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಘೋಷಿಸಲಾಯಿತು.
೯೦ ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀ ರದ ವಿಧಾನಸಭೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಎನ್‌ಸಿ ಹಾಗೂ ಕಾಂಗ್ರೆಸ್ ಅನುಕ್ರಮವಾಗಿ ೫೧ ಹಾಗೂ ೩೨ ಸ್ಥಾನಗಳಲ್ಲಿ ಸ್ಪರ್ಧಿ ಸಲು ಒಪ್ಪಂದ ಮಾಡಿಕೊಂಡಿವೆ. ಸಿಪಿಐ(ಎಂ ) ಮತ್ತು ಜಮ್ಮು ಮತ್ತು ಕಾಶ್ಮೀ ರ ನ್ಯಾಷನಲ್ ಪ್ಯಾಂಥರ್ಸ ಪಾರ್ಟಿ (ಜೆಕೆಎನ್ಪಿಪಿ)ಗೆ ತಲಾ ಒಂದು ಸ್ಥಾನವನ್ನು ನೀಡಲಾಗಿದೆ. ಐದು ಕ್ಷೇತ್ರಗಳಲ್ಲಿ ಸೌಹಾರ್ದ ಸ್ಪರ್ಧೆ ನಡೆಯಲಿದೆ.
ಜಮ್ಮು ಮತ್ತು ಕಾಶ್ಮೀ ರದಲ್ಲಿ ಸೆ. ೧೮ರಂದು ಮೊದಲ ಹಂತ, ಸೆ.೨೫ರಂದು ಎರಡನೇ ಹಂತ ಮತ್ತು ಅಕ್ಟೋಬರ್ ೦೧ರಂದು ಮೂರನೇ ಹಾಗೂ ಅಂತಿಮ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ ೪ರಂದು ಮತ ಎಣಿಕೆ ನಡೆಯಲಿದೆ.