ಹುಣಸೂರು: ಹುಣಸೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಕೆಟ್ಟಿದ್ದು ರೈತರಿಗೆ ಕುಡಿಯಲು ನೀರಿನ ಸಮಸ್ಯೆ ಎದುರಾಗುತ್ತಿದೆ ಇದನ್ನು ಕೂಡಲೇ ದುರಸ್ತಿಗೊಳಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಇಂದು ತಾಲ್ಲೋಕು ದಂಡಾಧಿಕಾರಿಗಳಿಗೆ ಜನಧ್ವನಿ ಫೌಂಡೇಶನ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಇದೆ ವೇಳೆ ಮಾತನಾಡಿದ ಫೌಂಡೇಶನ್ ಅಧ್ಯಕ್ಷ ,ವಕೀಲ ಆಯರಹಳ್ಳಿ ಪ್ರವೀಣ್ ಹುಣಸೂರಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹಲವು ದಿನಗಳಿಂದಲೂ ಕೂಡ ಶುದ್ದಕುಡಿಯುವ ನೀರಿನ ಘಟಕವು ಸ್ಥಗಿತ ಗೊಂಡಿದು ರೈತರು ಕುಡಿಯುವ ನೀರಿಲ್ಲದೆ ಪರದಾಡುತ್ತಿದ್ದಾರೆ ಕೂಡಲೇ ಸಂಬಂಧಪಟ್ಟವರು ಈ ಸಮಸ್ಯೆಯನ್ನು ಬಗೆಹರಿಸಲು ಸೂಚನೆ ನೀಡುವಂತೆ ಫೌಂಡೇಶನ್ ವತಿಯಿಂದ ಇಂದು ತಾಲ್ಲೋಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಒಂದು ವೇಳೆ ದುರಸ್ಥಿ ಕಾರ್ಯ ಮಾಡದ ಪಕ್ಷದಲ್ಲಿ ರೈತರ ಜೊತೆಗೂಡಿ ಆಗ್ರಹ ಮಾಡುವುದಾಗಿ ಎಚ್ಚರಿಕೆ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಹುಸೇನಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶಿವಕುಮಾರ್, ಫೌಂಡೇಶನ್ ಕಾರ್ಯದರ್ಶಿ ಸುನೀಲ್ ,ಯುವ ರೈತ ಶರತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.