ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : KPTCL ಲೈನ್ ಮ್ಯಾನ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೇ ಆಯ್ಕೆ ಮಾಡಿಕೊಳ್ಳುವ ಮೂಲಕ ಸರ್ಕಾರ ಪಾರದರ್ಶಕತೆ ಪ್ರದರ್ಶಿಸಬೇಕು. ಬೇರೆ ರಾಜ್ಯಗಳಲ್ಲಿಯೂ ಸಹ ಇದೆ ರೀತಿಯಾದ ನೇಮಕಾತಿ ಪ್ರಕ್ರಿಯೆ ಇರುವುದರಿಂದ ಕರ್ನಾಟಕವೂ ಸಹ ಇದೆ ಮಾದರಿಯನ್ನು ಅನುಸರಿಸಬೇಕು.
ಸ್ಪರ್ದಾತ್ಮಕ ಪರೀಕ್ಷೆಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆದರೆ ಸಮರ್ಥ ಹಾಗೂ ಅರ್ಹ ಅಭ್ಯರ್ಥಿಗಳ ನೇಮಕ ಆಗುತ್ತದೆ. ಇಲಾಖೆಗೆ ದಕ್ಷ, ಪ್ರಾಮಾಣಿಕ, ಸಮರ್ಥ ಹಾಗೂ ಅರ್ಹ ಸಿಬ್ಬಂದಿ ಸಿಕ್ಕಲ್ಲಿ ಇಲಾಖೆಯ ಉತ್ಪಾದಕತೆ ಹಾಗೂ ಕಾರ್ಯಕ್ಷಮತೆ ಹೆಚ್ಚುತ್ತದೆ ಎಚ್ಚೆತ್ತದೆ ಎಂದು ಜನಧ್ವನಿ ಫೌಂಡೇಶನ್ ಅಧ್ಯಕ್ಷ,ವಕೀಲ ಆಯರಹಳ್ಳಿ ಪ್ರವೀಣ್ ಮನವಿ ಮಾಡಿದ್ದಾರೆ ಈ ಹಿಂದೆಯೂ ಕೂಡ ಗ್ರಾಮ ಲೆಕ್ಕಿಗರ ಹುದ್ದೆಗೆ ನೇರ ನೇಮಕಾತಿ ಪ್ರಕ್ರಿಯೆ ಕೈ ಬಿಟ್ಟು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಬೇಕೆಂದು ಸರ್ಕಾರಕ್ಕೆ ಮನವಿ ನೀಡಲಾಗಿತ್ತು ಇದರನ್ವಯ ಸದರಿ ಸ್ಪರ್ಧಾತ್ಮಕ ಪರೀಕ್ಷೆ ಮೂಲಕವೇ ಅಭ್ಯಾರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲ್ಲು ಸರ್ಕಾರ ಸಮ್ಮತಿ ನೀಡಿಲಾಗಿದೆ ಆದೆ ರೀತಿಯಲ್ಲಿ K PT CL ಲೈನ್ ಮ್ಯಾನ್ ಹುದ್ದೆಗಳನ್ನು ಸಹ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಬೇಕೆಂದು ನಮ್ಮ ಫೌಂಡೇಶನ್ ವತಿಯಿಂದ ಮನವಿ ಮಾಡಲಾಗಿದೆ ಎಂದರು.