ಮಂಡ್ಯ: ಎನ್.ಡಿ.ಎ ನಡೆಸುತ್ತಿರುವ ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಜನಾಂದೋಲನ ಸಮಾವೇಶವು ನಾಳೆ ಮೈಷುಗರ್ ಮೈದಾನದಲ್ಲಿ ನಡೆಯಲಿದ್ದು, ಇದರ ಸಿದ್ದತಯನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಇಂದು ಸೋಮವಾರ ಸ್ಥಳ ಪರಿಶೀಲಿಸಿದರು.
ನಾಳೆ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ೩೦ ಸಾವಿರ ಜನರನ್ನು ಸೇರಿಸುವ ಗುರಿ ಹೊಂದಲಾಗಿದೆ. ಸ್ವತಃ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಭಾಗಿಯಾಗುವ ನೀರಿಕ್ಷೆಇದೆ.
ಈ ಸಂದರ್ಭದಲ್ಲಿ ಶಾಸಕರಾದ ಗಣಿಗ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ ಮತ್ತಿತರರಿದ್ದರು.