ಜವಾನ್ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಸೆಪ್ಟೆಂಬರ್ ೭ರಂದು ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಈ ಚಿತ್ರದ ಪ್ರಿವ್ಯೂ ವಿಡಿಯೋ ನೋಡಿದ ಅನೇಕರಿಗೆ ಸಿನಿಮಾದಲ್ಲಿ ಭರ್ಜರಿ ಆಕ್ಷನ್ ಇರಲಿದೆ ಎಂಬುದು ಸ್ಪಷ್ಟವಾಗಿದೆ. ಈ ಸಿನಿಮಾ ಭರ್ಜರಿ ಕಮಾಯಿ ಮಾಡುವ ಮುನ್ಸೂಚನೆ ಸಿಕ್ಕಿದೆ. ಈ ಬೆನ್ನಲ್ಲೇ ಚಿತ್ರಕ್ಕೆ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಂಡಿದೆ. ವಿಶೇಷ ಎಂದರೆ ಚಿತ್ರದ ಯಾವುದೇ ದೃಶ್ಯಕ್ಕೆ ಕತ್ತರಿ ಪ್ರಯೋಗ ಆಗಿಲ್ಲ. ಇದು ಶಾರುಖ್ ಅಭಿಮಾನಿಗಳಿಗೆ ಖುಷಿ ನೀಡಿದೆ. ಚಿತ್ರದ ಟ್ರೇಲರ್‌ಗಾಗಿ ಫ್ಯಾನ್ಸ್ ಕಾದಿದ್ದಾರೆ.
ಜವಾನ್ ಸಿನಿಮಾಗೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಎಲ್ಲರೂ ಸಿನಿಮಾ ವೀಕ್ಷಿಸಬಹುದು. ಆದರೆ, ೧೮ ವರ್ಷ ಒಳಗಿನವರು ಪೋಷಕರ ಮಾರ್ಗದರ್ಶನದಲ್ಲಿ ಸಿನಿಮಾ ನೋಡಬಹುದು. ಇನ್ನು ಸಿನಿಮಾದ ಅವಧಿ ೧೬೯.೧೪ ನಿಮಿಷ ಇದೆ. ಅಂದರೆ ಸಿನಿಮಾದ ರನ್?ಟೈಮ್ ಎರಡು ಗಂಟೆ ನಲವತ್ತೊಂಭತ್ತು ನಿಮಿಷ ಇರಲಿದೆ. ಈ ಸಿನಿಮಾದಲ್ಲಿ ಭರ್ಜರಿ ಆ?ಯಕ್ಷನ್ ನಿರೀಕ್ಷಿಸಲಾಗುತ್ತಿದೆ.
ಸಿನಿಮಾದಲ್ಲಿ ವಿವಾದಾತ್ಮಕ ವಿಚಾರ ಇದ್ದರೆ ಮುಂದೆ ದೊಡ್ಡ ಮಟ್ಟದಲ್ಲಿ ವಿವಾದ ಉಂಟಾಗಬಹುದು. ಸಿನಿಮಾ ಬ್ಯಾನ್ಗೆ ಒತ್ತಾಯ ಬರಬಹುದು. ಈ ಕಾರಣದಿಂದಲೇ ಸೆನ್ಸಾರ್ ಮಂಡಳಿಯವರು ಹೆಚ್ಚು ಎಚ್ಚರಿಕೆಯಿಂದ ಸಿನಿಮಾ ನೋಡುತ್ತಾರೆ. ಏನಾದರೂ ವಿವಾದಾತ್ಮಕ ಅಂಶ ಕಂಡರೆ ಕತ್ತರಿ ಪ್ರಯೋಗ ಮಾಡಲು ಸೂಚಿಸುತ್ತಾರೆ. ಆದರೆ, ಜವಾನ್ ಚಿತ್ರದ ಯಾವುದೇ ದೃಶ್ಯಕ್ಕೂ ಕತ್ತರಿ ಬಿದ್ದಿಲ್ಲ. ಹೀಗಾಗಿ, ಸಿನಿಮಾದಲ್ಲಿ ಯಾವುದೇ ವಿವಾದಾತ್ಮಕ ಅಂಶ ಇಲ್ಲ ಎಂಬುದು ಪಕ್ಕಾ ಆಗಿದೆ.
ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಕಾರಣದಿಂದ ಶಾರುಖ್ ಖಾನ್ ಅಭಿಮಾನಿಗಳಿಗೆ ಜವಾನ್ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ. ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟಿರೋ ಅಟ್ಲೀ ಅವರು ಜವಾನ್ ಸಿನಿಮಾ ನಿರ್ದೇಶನ ಮಾಡಿದ್ದಾರೆ. ದಕ್ಷಿಣ ಭಾರತದ ಕಲಾವಿದರಾದ ನಯನತಾರಾ, ವಿಜಯ್ ಸೇತುಪತಿ ಮೊದಲಾದವರು ನಟಿಸಿದ್ದಾರೆ. ಶಾರುಖ್ ಖಾನ್ ಸೈನಿಕನ ಪಾತ್ರದಲ್ಲಿ ಕಾಣಿಸಿದ್ದಾರೆ.