ಕೆ.ಆರ್.ನಗರ : ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕು ಆಡಳಿತದ ವತಿಯಿಂದ ಶ್ರೀ ಹಡಪದ ಅಪ್ಪಣ್ಣರವರ ಜಯಂತ್ಯೋತ್ಸವ ಮತ್ತು ಡಾ||ಫ.ಗು ಹಳಕಟ್ಟಿಯವರ ಜನ್ಮದಿನ-ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಕೃಷ್ಣರಾಜನಗರ ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ನೆರವೇರಿತು.
ಈ ಕಾರ್ಯಕ್ರಮವನ್ನು ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ ರವಿಶಂಕರ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ ರವಿಶಂಕರ್ ಅವರು ಇಂತಹ ಮಹನೀಯರ ದಿನಾಚರಣೆಯನ್ನು ಮಾಡುವ ಮೂಲಕ ಅವರನ್ನು ಸ್ಮರಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕು ಎಂದರು ಹಾಗೂ ಹಿಂದುಳಿದ ಸಮಾಜದ ಎಲ್ಲ ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಸ್ಪಂದಿಸಿ ಹಿಂದುಳಿದ ಸಮಾಜವನ್ನು ಕ್ಷೇತ್ರದಲ್ಲಿ ಮೇಲೆ ಎತ್ತುವ ಕೆಲಸವನ್ನು ಮಾಡುತ್ತೇನೆ ಎಂದರು. ಹಾಗೂ ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರದ ಸಾಲಿಗ್ರಾಮ ತಾಲೂಕಿನ ಮಿರ್ಲೆ ಗ್ರಾಮದಲ್ಲಿ ಸವಿತಾ ಸಮಾಜದ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ರವರ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ರವರು ಸವಿತಾ ಸಮಾಜಕ್ಕೆ ಶಿವಶರಣ ಅಪ್ಪಣ್ಣ ರವರ ಕೊಡುಗೆ ಅಪಾರವಾದದ್ದು ಅವರ ಮಾರ್ಗದರ್ಶನದಲ್ಲಿ ನಮ್ಮ ಸಮಾಜ ನಡೆಯಬೇಕಾಗಿದೆ ಎಂದರು ಒಂದು ಕಾರ್ಯಕ್ರಮದಲ್ಲಿ ವಿವಿಧ ಮುಖಂಡರು ಸಮಾಜದ ಮುಖಂಡರು ಗಣ್ಯರು ಸೇರಿದಂತೆ ಇನ್ನಿತರರು ಹಾಜರಿದ್ದರು.
