ಮದ್ದೂರು: ತಾಲೂಕಿನ ಚಾಮನಹಳ್ಳಿ ಗ್ರಾಮ ಹಾಗೂ ಕೆಸ್ತೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹುಳಗನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಜಂಟಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಪರ ಮತಯಾಚನೆ ನಡೆಸಿದರು.

ಈ ವೇಳೆ ಮಾತನಾಡಿದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಂದೀಶ್ ಗೌಡ ಎರಡು ಬಾರಿ ಮುಖ್ಯಮಂತ್ರಿಗಳಾಗಿ ಮಾಡಿರುವ ಜನಪರ ಕಾರ್ಯಗಳನ್ನ ಮೆಚ್ಚಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿ ರವರ ನಾಯಕತ್ವವನ್ನು ಮೆಚ್ಚಿ ಪ್ರತಿಯೊಬ್ಬರು ಕುಮಾರಸ್ವಾಮಿ ರವರಿಗೆ ಆಶೀರ್ವಾದವನ್ನು ಮಾಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಬಿಜೆಪಿ ತಾಲೂಕು ಅಧ್ಯಕ್ಷ ಸತೀಶ್, ಮನ್ ಮುಲ್ ನಿರ್ದೇಶಕಿ ರೂಪಾ, ಬಿಜೆಪಿ ತಾಲೂಕು ಮಹಿಳಾ ಅಧ್ಯಕ್ಷ ಶ್ವೇತ, ಸೇರಿದಂತೆ ಇತರರು ಹಾಜರಿದ್ದರು.