ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇದಕ್ಕೆ ಜೆಡಿಎಸ್ ಬೆಂಬಲ ಇಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಪಾದಯಾತ್ರೆ ವಿಚಾರದಲ್ಲಿ ನಮ್ಮನ್ನು (ಜೆಡಿಎಸ್) ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಅದಕ್ಕೆ ನಮ್ಮ ಬೆಂಬಲವಿಲ್ಲ ಎಂದರು.
ಕೇರಳದಲ್ಲಿ ಮಳೆಯಿಂದ ನೂರಾರು ಜನರ ಜೀವಕ್ಕೆ ಹಾನಿಯಾಗಿದೆ. ರಾಜ್ಯದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಯೆಲ್ಲೋ, ರೆಡ್ ಅಲರ್ಟ್ ಘೋಷಣೆ ಆಗಿದೆ. ಮತ್ತೊಂದೆಡೆ, ಈಗ ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಸಮಯ. ಹೀಗಾಗಿ ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದರು.