ಮೈಸೂರು: ಒಕ್ಕಲಿಗ ಯುವ ಬ್ರಿಗೇಡ್ ಹಾಗೂ ಎನ್‌ಆರ್‌ಐ ಒಕ್ಕಲಿಗರ ಬ್ರಿಗೇಡ್‌ನಿಂದ ನ.೧೯ರಂದು ನಗರದ ಹೆಬ್ಬಾಳದ ಬಿಜಿಎಸ್ ಆದ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭಾಭವನದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ
ಇಂದು ನಗರದ ಪತ್ರಕರ್ತರಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಒಕ್ಕಲಿಗ ಯುವ ಬ್ರಿಗೇಡ್‌ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ಮಾತನಾಡಿ, ನ.೧೯ರಂದು ೬೦ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದರು
೧೫೦ಕ್ಕೂ ಹೆಚ್ಚು ಮಕ್ಕಳಿಗೆ ಶಿಕ್ಷಣ ಕೊಡಿಸುವ ದ್ಯೇಯ ನಮ್ಮದಾಗಿದೆ. ಅಂದು ನಗರದ ಹೆಬ್ಬಾಳದಲ್ಲಿರುವ ಶ್ರೀ ಲಕ್ಷಿಕಾಂತ ದೇವಾಲಯದ ಆವರಣದಲ್ಲಿ ನಡೆಯುವ ಮೇಳಕ್ಕೆ ಬರುವವರು ತಮ್ಮ ಸ್ವ ವಿವರಗಳೊಂದಿಗೆ ಆಗಮಿಸಬೇಕು ಎಂದರು.
ಆದಿಚುಂಚನಗಿರಿ ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಶ್ರೀ ಮುಕ್ತಿದಾನಂದ ಸ್ವಾಮೀಜಿ ಸಾನಿದ್ಯ ಹಾಗೂ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷ ಎಚ್.ಸಿ.ಕಿಶೋರ್‌ಚಂದ್ರ ಅಧ್ಯಕ್ಷತೆವಹಿಸುವರು.
ಬೆಂಗಳೂರಿನ ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೋಲಾಜಿಯ ಮಾಜಿ ನಿರ್ದೇಶಕ ಡಾ.ಸಿ.ರಾಮಚಂದ್ರ ಉದ್ಘಾಟನೆ ಮಾಡುವರು. ಎಂದರು. ಹೆಚ್ಚಿನ ಮಾಹಿತಿಗೆ ಮೊ.೯೬೮೬೫೬೪೧೯೨, ೮೬೬೦೫೬೯೧೭೩ ಅನ್ನು ಸಂಪರ್ಕಿಸಬಹುದಾಗಿದೆ. ಕಾರ್ಯಕ್ರಮದಲ್ಲಿ ಬ್ರಿಗೇಡ್‌ನ ಕಾರ್ಯದರ್ಶಿ ರಾಮಕೃಷ್ಣೇಗೌಡ, ಉಪನ್ಯಾಸಕ ಡಾ.ಪ್ರದೀಪ್‌ಕುಮಾರ್, ರವಿಚಂದ್ರ ಗೋಷ್ಠಿಯಲ್ಲಿದ್ದರು.