Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ಉದ್ಯೋಗಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶ

ಮಂಡ್ಯ: ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ ೧೯ ಮತ್ತು ಫೆಬ್ರವರಿ ೨೦ ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳು ಅಂದು ಬೆಳಿಗ್ಗೆ ೯ ಗಂಟೆಗೆ ತಮ್ಮ ಎಲ್ಲಾ ಮೂಲ ಸ್ವ-ವಿವರ ಪತ್ರಗಳ ಜೆರಾಕ್ಸ್ ಮತ್ತು ಆಧಾರ್ ಕಾರ್ಡ್ ನಕಲು ಪ್ರತಿಯನ್ನು ತೆಗೆದುಕೊಂಡು ಬಂದು ಭಾಗವಹಿಸಬಹುದಾಗಿದೆ. ಮೇಳದಲ್ಲಿ ಹೆಸರಾಂತ ಕಂಪನಿಗಳು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವರು.

ಹೆಚ್ಚಿನ ಮಾಹಿತಿಗಾಗಿ ೦೮೨೩೨-೨೯೫೦೧೦ ಅಥವಾ ೧೮೦೦೫೯೯೯೯೧೮ ಹಾಗೂ https://udyogamela.skillconnect.kaushalkar.com/candidaterRegistration ವೆಬ್ ಸೈಟ್ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular