ಮಂಡ್ಯ : ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ನಾಮ ನಿರ್ದೇಶಕರಾಗಿ ಹಿರಿಯ ಪತ್ರಕರ್ತ ಎನ್.ಕೃಷ್ಣೇಗೌಡ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಸರ್ಕಾರದ ಕಾರ್ಯದರ್ಶಿ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಡಾ.ಜೆ.ಸಿ.ಪ್ರಕಾಶ್ ಅವರು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ನಿರ್ದೇಶಕರಾಗಿ ಎನ್.ಕೃಷ್ಣೇಗೌಡ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.