ರಾಮನಗರ: ರಾಮನಗರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂ. 28ರ ಬುಧವಾರ ಉಚಿತ ನೇರ ಸಂದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ನೇರ ಸಂದರ್ಶನ ಕಾರ್ಯಕ್ರಮದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ಉದ್ಯೋಗಾಂಕ್ಷಿಗಳನ್ನು ನೇಮಕ ಮಾಡಿಕೊಳ್ಳಲಿರುವುದರಿಂದ ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ/ರೆಸ್ಯೂಮ್ (ಬಯೋಡೇಟಾ), ಇತ್ಯಾದಿ ದಾಖಲೆಗಳೊಂದಿಗೆ ಜೂ. 28ರ ಬುಧವಾರ ಬೆಳಿಗ್ಗೆ 10.30ಕ್ಕೆ ಜಿಲ್ಲಾ ಕೌಶಲ್ಯ ಕೇಂದ್ರ/ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಾಶ್ ಚಂದ್ರ ಕಾಂಪ್ಲೆಕ್ಸ್, ಕೆ.ಎಸ್.ಆರ್.ಟಿಸಿ ಡಿಪೋ ಎದುರು, ಬಿ.ಎಂ. ರಸ್ತೆ ರಾಮನಗರ ಇಲ್ಲಿ ನಡೆಯುವ ನೇರ ಸಂದರ್ಶನ ಕಾರ್ಯಕ್ರಮಕ್ಕೆ ಹಾಜರಾಗಿ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ: 080-27273364, 9900331779 ಅಥವಾ 9964784178ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.