Saturday, April 19, 2025
Google search engine

Homeರಾಜ್ಯಜು. 15ರಿಂದ ಮುಂಗಾರು ಅಧಿವೇಶನ: ಸಭಾಧ್ಯಕ್ಷ ಯು.ಟಿ ಖಾದರ್

ಜು. 15ರಿಂದ ಮುಂಗಾರು ಅಧಿವೇಶನ: ಸಭಾಧ್ಯಕ್ಷ ಯು.ಟಿ ಖಾದರ್

ಬೆಂಗಳೂರು: ೧೬ನೇ ವಿಧಾನಸಭೆಯ ಮುಂಗಾರು ಅಧಿವೇಶನ ಜುಲೈ ೧೫ ರಿಂದ ೨೬ರವರೆಗೆ ಒಟ್ಟು ೯ ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದು ಸಭಾಧ್ಯಕ್ಷ ಯು.ಟಿ ಖಾದರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಯು.ಟಿ.ಖಾದರ್ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು ಎಂದರು. ೯ ದಿನಗಳ ಕಾಲ ಪ್ರಶ್ನೋತ್ತರ ಕಲಾಪವನ್ನು ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನ ಸೆಳೆಯುವ ಸೂಚನೆ, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ ೬೯ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕ್ರಮಗಳನ್ನ ನಡೆಸಲಾಗುವುದು.

೨೦೨೪-೨೪ನೇ ಸಾಲಿನ ವಿಧಾನ ಮಂಡಲ, ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಅವಧಿ ಆಗಸ್ಟ್ ೮ರಂದು ಮುಕ್ತಾಯಗೊಳ್ಳಲಿದೆ. ಹೀಗಾಗಿ ೨೦೨೪-೨೫ನೇ ಸಾಲಿಗೆ ಹೊಸದಾಗಿ ಸಮಿತಿಗಳನ್ನ ರಚಿಸುವ ಸಂಬಂಧ ಚುನಾವಣಾ ಪ್ರಸ್ತಾವವನ್ನ ಮಂಡಿಸಿ, ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

RELATED ARTICLES
- Advertisment -
Google search engine

Most Popular