ರಾಮನಗರ: ರಾಮನಗರದ ಅಂಬೇಡ್ಕರ್ ಭವನ, ಅರ್ಕೇಶ್ವರ ಕಾಲೋನಿಯಲ್ಲಿ ವಿದ್ಯುತ್ ಸಮಸ್ಯೆಗಳನ್ನು ಆಲಿಸಿ ಹಾಗೂ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬೆಸ್ಕಾಂ ಇಲಾಖೆ ಜು. 15ರ ಶನಿವಾರ ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಸಭೆಯನ್ನು ಹಮ್ಮಿಕೊಂಡಿದ್ದು, ಗ್ರಾಹಕರು ತಮ್ಮ ವಿದ್ಯುತ್ ಸಮಸ್ಯೆಗಳನ್ನು ಅರ್ಜಿ ಮುಖೇನ/ಮೌಖಿಕವಾಗಿ ದೂರುಗಳನ್ನು ಸಲ್ಲಿಸಿ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವತಿಯಿಂದ ಜು. 15ರ ಶನಿವಾರ ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಕುಂದು ಕೊರತೆ ಸಭೆಯನ್ನು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಬೆ.ವಿ.ಕಂ., ರಾಮನಗರ ನಗರ ಉಪವಿಭಾಗ ಕಚೇರಿಯಲ್ಲಿ ಏರ್ಪಡಿಸಲಾಗಿದೆ. ರಾಮನಗರ ನಗರ ಗ್ರಾಹಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ರಾಮನಗರ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.