Saturday, July 26, 2025
Google search engine

Homeಅಪರಾಧ2022ರಿಂದ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ

2022ರಿಂದ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ನ್ಯಾಯಾಲಯಕ್ಕೆ ಹಾಜರಾಗದೇ 2022 ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಠಾಣಾ ಅ.ಕ್ರ 58/2021 U/S 379 ಐಪಿಸಿ ಪ್ರಕರಣದ ಆರೋಪಿ ಮಂಜೇಶ್ವರದ ಯತಿರಾಜ್ ಎಂಬಾತನು ಪ್ರಕರಣದ ವಿಚಾರಣೆಗಾಗಿ ಸುಮಾರು ಏಳು ಬಾರಿ ಮಾನ್ಯ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದ್ದು ಇಲ್ಲಿಯವರೆಗೆ ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿತನು ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ಮಾನ್ಯ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆಯಲ್ಲಿ ಆತನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆ ಅಪರಾಧ ಸಂಖ್ಯೆ: 65/2025 ಕಲಂ: 269 BNS 2023 ರಂತೆ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

ಈತನು ಪುತ್ತೂರು ನಗರ, ಬಂಟ್ವಾಳ ನಗರ, ವೇಣೂರು ಪೊಲೀಸ್ ಠಾಣೆಗಳಲ್ಲಿ ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿರುತ್ತಾನೆ. ಮತ್ತು ಈತನ ಮೇಲೆ ಕೊಣಾಜೆ, ಕಾವೂರು, ವಿಟ್ಲ ಠಾಣೆಗಳಲ್ಲಿ ಒಟ್ಟು ಸುಮಾರು 7 ಪ್ರಕರಣಗಳು ದಾಖಲಾಗಿರುತ್ತದೆ.

RELATED ARTICLES
- Advertisment -
Google search engine

Most Popular