Monday, April 21, 2025
Google search engine

Homeಅಪರಾಧಕೇಜ್ರಿವಾಲ್, ಕವಿತಾ ಗೆ ಮತ್ತೆ ನ್ಯಾಯಾಂಗ ಬಂಧನ : ಮೇ.೭ರವರೆಗೆ ವಿಸ್ತರಣೆ

ಕೇಜ್ರಿವಾಲ್, ಕವಿತಾ ಗೆ ಮತ್ತೆ ನ್ಯಾಯಾಂಗ ಬಂಧನ : ಮೇ.೭ರವರೆಗೆ ವಿಸ್ತರಣೆ

ನವದೆಹಲಿ: ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ ೭ ರವರೆಗೆ ವಿಸ್ತರಿಸಿದೆ.

ಸಿಬಿಐ ಮತ್ತು ಇಡಿ ವಿಷಯಗಳ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಕೇಜ್ರಿವಾಲ್ ಅವರ ಬಂಧನದ ಅವಧಿ ಮುಗಿದ ಬಳಿಕ ಅವರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಅವರ ಕಸ್ಟಡಿಯನ್ನು ವಿಸ್ತರಿಸಲಾಗಿದೆ.

ಇತ್ತ ಸಿಬಿಐ ತನಿಖೆ ನಡೆಸುತ್ತಿರುವ ಮದ್ಯನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ತೆಲಂಗಾಣ ಎಂಎಲ್‌ಸಿ ಮತ್ತು ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ ೭ ರವರೆಗೆ ನ್ಯಾಯಾಧೀಶರು ವಿಸ್ತರಿಸಿದ್ದಾರೆ.

RELATED ARTICLES
- Advertisment -
Google search engine

Most Popular