ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.
ಜೂನ್ 08 ರಿಂದ 12 ರವರೆಗೆ ಕರಾವಳಿ ಮತ್ತು ಪಕ್ಕದ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಕಟಣೆಯಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡಾ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದೆ.