Monday, June 2, 2025
Google search engine

Homeರಾಜ್ಯಸುದ್ದಿಜಾಲಜೂ. 4 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ

ಜೂ. 4 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ

ಮಂಡ್ಯ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿ ಕಾರ್ಯಕ್ರಮವನ್ನು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜೂನ್ 4 ರಂದು ಬೆಳಿಗ್ಗೆ 11:00 ಗಂಟೆಗೆ ಆಯೋಜಿಸಲಾಗಿದೆ.

ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದು, ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಶ್ರೀರಂಗಪಟ್ಟಣ ವಿಧಾನಸಭಾ ಶಾಸಕರು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮಳವಳ್ಳಿ ವಿಧಾನಸಭಾ ಶಾಸಕರು ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಮಂಡ್ಯ ವಿಧಾನಸಭಾ ಕ್ಷೇತ್ರ ಶಾಸಕರಾದ ಪಿ. ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಮೇಲುಕೋಟೆ ವಿಧಾನಸಭಾ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೆ.ಆರ್.ಪೇಟೆ ವಿಧಾನಸಭಾ ಶಾಸಕರಾದ ಹೆಚ್.ಟಿ ಮಂಜು, ಮದ್ದೂರು ವಿಧಾನಸಭಾ ಶಾಸಕರಾದ ಕೆ.ಎಂ ಉದಯ, ವಿಧಾನ ಪರಿಷತ್ ಶಾಸಕರಾದ ಕೆ. ವಿವೇಕಾನಂದ, ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್ (ನಾಗೇಶ್), ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ನಯೀಮ್ ಆಗಮಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಅನ್ಬು ಕುಮಾರ್ ಆಗಮಿಸಲಿದ್ದು, ಮಹಿಳಾ ಸರ್ಕಾರಿ ಕಾಲೇಜಿನ ಇತಿಹಾಸ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ಎಸ್ ಶಿವರಾಮು ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

RELATED ARTICLES
- Advertisment -
Google search engine

Most Popular