ಧಾರವಾಡ : ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ತಡೆಗಟ್ಟಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.
ಇಂದು (ಜೂ). ೨೩) ಸಂಜೆ ಜಿಲ್ಲಾಧಿಕಾರಿಗಳ ಕಛೇರಿಯ ನೂತನ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಆಚರಣೆಯಲ್ಲಿ ಜಾನುವಾರು ಹತ್ಯೆ ಹಾಗೂ ಜಾನುವಾರು ಸಾಗಾಟ ತಡೆ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾದ್ಯಂತ ಜೂನ್ ೨೯ ರಂದು ಬಕ್ರೀದ್ ಹಬ್ಬದ ಆಚರಣೆಯಲ್ಲಿ ಜಾನುವಾರುಗಳನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಜಿಲ್ಲೆಯಲ್ಲಿ ೧೫ ಚೆಕ್ ಪೇಜಿಸ್ಟ್ ಗಳನ್ನು ಅಳವಡಿಸಲಾಗಿದೆ. ಜಾನುವಾರುಗಳನ್ನು ರಕ್ಷಿಸಿದ ನಂತರ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಬೇಕು. ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಉಮೇಶ ಕೊಂಡಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನ, ಸಹಾಯಕ ಪೊಲೀಸ್ ಆಯುಕ್ತ ವಿಜಯಕುಮಾರ್. ಟಿ., ಡಿವೈಎಸ್ ಪಿ ಎಸ್. ಎಸ್.ಹಿರೇಮಠ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.